Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆ ಆಡಳಿತ ಮಂಡಳಿ ಮತ್ತು ಶಿಕ್ಷಕರ ಸಮಾಲೋಚನಾ ಸಭೆ
    ಊರ್ಮನೆ ಸಮಾಚಾರ

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆ ಆಡಳಿತ ಮಂಡಳಿ ಮತ್ತು ಶಿಕ್ಷಕರ ಸಮಾಲೋಚನಾ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಆಡಳಿತದಲ್ಲಿ ನಡೆಯುತ್ತಿದ್ದು, ಶಾಲಾ ಆರಂಭದ ಸಮಯದಲ್ಲಿ ಶಿಕ್ಷಕರೊಂದಿಗೆ ಆಡಳಿತ ಮಂಡಳಿಯ ಸಭೆಯು ಸೋಮವಾರದಂದು ಜರುಗಿತು.

    Click Here

    Call us

    Click Here

    ಪ್ರಗತಿ ಪರಿಶೀಲನೆಯ ಸಲುವಾಗಿ, ನಡೆದ ಈ ಸಭೆಯಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಎ. ನಾರಾಯಣ ರಾವ್ ಮಾತನಾಡಿ, ಶಿಕ್ಷಕರು ತಮ್ಮನ್ನು ತಾವು ಅಧ್ಯಾಪನ ಕಾರ್ಯದಲ್ಲಿ ಸದಾ ತೊಡಗಿಸಿಕೊಳ್ಳಬೇಕು. ಪುಸ್ತಕದ ವಿಚಾರ ತಲುಪಿಸುವುದರ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕಾರಗಳನ್ನು ಬಿತ್ತಬೇಕು. ಶಿಕ್ಷಣಸಂಸ್ಥೆ ಹೆಸರು ಮಾಡುವುದು ಉತ್ತಮ ಅಧ್ಯಾಪಕ ವೃಂದದಿಂದಲೇ. ಶಿಕ್ಷಕವೃತ್ತಿ ಅತ್ಯಂತ ಗುರುತರವಾದ ಕೆಲಸ.

    ತನ್ನ ವ್ಯಕ್ತಿತ್ವವನ್ನು  ವಿಕಾಸಗೊಳಿಸಿಕೊಂಡು ತಾಳ್ಮೆಯಿಂದ ವರ್ತಿಸಬೇಕು. ಮಕ್ಕಳ ಮಾತನ್ನು ಕೇಳುವ ಗುಣ ಬೆಳೆಸಿಕೊಳ್ಳಬೇಕು. ಉತ್ತಮಸಂಸ್ಕಾರವಂತರನ್ನಾಗಿ ವಿದ್ಯಾರ್ಥಿಗಳನ್ನು ರೂಪಿಸಬೇಕಾದುದು ತಮ್ಮ ಆದ್ಯ ಕರ್ತವ್ಯವಾಗಿದೆ. ನನ್ನಿಂದ ನೂರಾರು ಜನ ಕಲಿಯುತ್ತಿದ್ದಾರೆಂಬ ಜ್ಞಾನವಿದ್ದು, ಕಾರ್ಯದಲ್ಲಿತೊಡಗಿಕೊಳ್ಳಿ ಎಂದು ಶಿಕ್ಷಕರಿಗೆ ಕಿವಿಮಾತುಗಳನ್ನಾಡಿದರು.

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಗಣೇಶ್ ಕಾಮತ್ ಮಾತನಾಡುತ್ತಾ  ನಾವು ಕೊಡಪಾನ ತಂಬಿಗೆಗಳಿಂದ ಪಾಠ ಕಲಿತಿರಬೇಕು. ಕೊಡಪಾನ ಬಾವಿಯಿಂದ ನೀರನ್ನು ಸ್ವೀಕರಿಸುವಾಗ ಬಗ್ಗುತ್ತದೆ, ಹಾಗೆಯೇ  ತನ್ನ ನೀರನ್ನು ತಂಬಿಗೆಗೆ ತುಂಬಿಸುವಾಗಲೂ ತಂಬಿಗೆಯ ಯೋಗ್ಯತೆಗನುಗುಣವಾಗಿ ಬಗ್ಗುತ್ತದೆ. ಅದರಂತೆ ಶಿಕ್ಷಕರು ಅಧ್ಯಯನ ಅಧ್ಯಾಪನದ ಸಮಯಗಳಲ್ಲಿ ವಿನಯಾದಿಗುಣಗಳಿಂದ ಅಲಂಕೃತರಾಗಿರಬೇಕು ಎಂದರು.

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಎಲ್. ಟಿ. ತಿಮ್ಮಪ್ಪ ಹೆಗಡೆ, ಡಾ. ಹೆಚ್ ಶಾಂತಾರಾಮ್ ಹಾಗೂ ಸಂಸ್ಥಾಪಕರಾದ ವೇದಮೂರ್ತಿ ರಾಮಚಂದ್ರ ಭಟ್ಟರೆಂಬ ಹಿರಿಯ ತ್ರಿಮೂರ್ತಿಗಳಿಂದ ಸೃಜಿಸಲ್ಪಟ್ಟ. ಈ ಶಾಲೆಯು ಉತ್ತಮ ಸಂಸ್ಕಾರವನ್ನು ಕೊಡುತ್ತಿರಬೇಕೆಂದು ಮನದಾಳದ ಮಾತನ್ನಾಡಿದರು.

    Click here

    Click here

    Click here

    Click Here

    Call us

    Call us

    ಶಿಕ್ಷಕರ ಬೇಡಿಕೆಗಳನ್ನು ಗಮನಿಸಿ, ಅಧ್ಯಕ್ಷತೆಯ ನುಡಿಗಳಲ್ಲಿ ಎಲ್.ಟಿ. ತಿಮ್ಮಪ್ಪನವರು ಮಾತನಾಡುತ್ತಾ ಯಾವುದೇ ಕಾರಣದಿಂದಲೂ ವಿದ್ಯಾರ್ಥಿಗಳನ್ನು ದೈಹಿಕವಾಗಿ ಶಿಕ್ಷಿಸಬಾರದು. ಭೇದಭಾವ ಮಾಡಬಾರದು. ವಿದ್ಯಾರ್ಥಿಗಳನ್ನು ದೇಶದ ಸತ್ಪ್ರ್ರಜೆಗಳನ್ನಾಗಿ ರೂಪಿಸಿರಿ. ಹಿಂದಿನ ವರ್ಷದ ಸಾಧನೆ ಅಭಿನಂದನಾರ್ಹ ಎನ್ನುತ್ತಾ ಶಿಕ್ಷಕರನ್ನು  ಹುರಿದುಂಬಿಸಿದರು.

    ಶಾಲೆಯ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್., ಶಾಲೆಯ ಶಿಕ್ಷಕವೃಂದ ಹಾಗೂ ಶಿಕ್ಷಕೇತರವೃಂದದ ಸರ್ವ ಸದಸ್ಯರೂ ಸಭೆಯಲ್ಲಿ ಉಪಸ್ಥಿತರಿದ್ದರು.

    ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.