ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ನಲ್ಲಿ ಒಂದು ದಿನದ ಶೈಕ್ಷಣಿಕ ಮತ್ತು ವ್ಯಕ್ತಿತ್ವ ವಿಕಸನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಡೀನ್ ರಾದ ಡಾ. ಪದ್ಮಚರಣ ಸ್ವೈನ್ ಅವರು ಕಾರ್ಯಾಗಾರದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಐಎಂಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ, ಉಪ ಪ್ರಾಂಶುಪಾಲರಾದ ಸೌಜನ್ಯ, ಆಡಳಿತಾಧಿಕಾರಿಯಾದ ಪಾರ್ಥಸಾರಥಿ ಇದ್ದರು.
ಕಾರ್ಯಕ್ರಮವು ವಿದ್ಯಾರ್ಥಿನಿ ಮಿಸ್ಬಾ ಕೌಸರ್ ಅವರ ಸ್ವಾಗತಿಸಿದರು. ಮುಜ್ಞಾನವರು ವಂದನಾರ್ಪಣೆಗೈದರು. ಸಿಂಧು ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಭಾ ಕಾರ್ಯಕ್ರಮದ ನಂತರ ಡಾ. ರಾಮಕೃಷ್ಣ ಹೆಗಡೆ ಅವರು ಅತ್ಯಂತ ಕ್ರಿಯಾಶೀಲವಾಗಿ ಯಶಸ್ವೀ ಕಾರ್ಯಗಾರವನ್ನು ನಡೆಸಿಕೊಟ್ಟರು.
ಬಹಳ ಚಟುವಟಿಕೆಯಿಂದ ಕೂಡಿದ ಈ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಭಾಗವಹಿಸಿದ್ದರು. ಸುಷ್ಮಾ ಉಪಾಧ್ಯಯ ಮತ್ತು ಪವಿತ್ರಾ ಅವರು ಈ ಕಾರ್ಯಕ್ರಮ ಸಂಯೋಜಿಸಿದ್ದರು.
















