ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಹೊಸನಗರ ತಾಲೂಕಿನ ಕೋಡೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಅವರು ಶಿವಮೊಗ್ಗ ಕಡೆಗೆ ತೆರಳುವ ವೇಳೆ ಅಪಘಾತ ನಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾಗಿದೆ. ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿನ ಚಾಲಕ ಜಾನುವಾರು ಅಡ್ಡ ಬಂದ ಕಾರಣ ಹಠಾಟ್ ಬ್ರೇಕ್ ಹಾಕಿ ಕಾರು ನಿಲ್ಲಿಸಿದ್ದಾರೆ. ಇದರಿಂದ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇದೇ ವೇಳೆ ಶಾಸಕರೂ ಕೂಡ ತಮ್ಮ ಸ್ನೇಹಿತರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಸರಣಿ ಅಪಘಾತದಿಂದಲೇ ಪಾರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ/
ಅವರು ಉಡುಪಿಯಲ್ಲಿ ಸಭೆ ಮುಗಿಸಿ, ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದರು. ಘಟನೆಯ ಬಳಿಕ ಪ್ರಯಾಣ ಮೊಟಕುಗೊಳಿಸಿ ಹಿಂದಿರುಗಿದ್ದಾರೆ ಎಂದು ತಿಳಿದುಬಂದಿದೆ. ರಿಪ್ಪನಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










