ಗಂಗೊಳ್ಳಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Call us

Call us

Call us

ಗಂಗೊಳ್ಳಿ : ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘ ಗಂಗೊಳ್ಳಿ ಹಾಗೂ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲಾ ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ ಭಾನುವಾರ ಉಚಿತ ಆರೋಗ್ಯ (ಆಯುರ್ವೇದ) ತಪಾಸಣಾ ಶಿಬಿರವು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು.

Call us

Click Here

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಣಿಪಾಲ ಕೆಎಂಸಿ ಆಸ್ಪತ್ರೆಯ ಆಯುರ್ವೇದ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್.ಕಾಮತ್, ಆಯುರ್ವೇದ ಅತ್ಯಂತ ಪ್ರಾಚೀನವಾದ ಔಷಧ ಪದ್ಧತಿಯಾಗಿದ್ದು, ಜನರಿಗೆ ಆಯುರ್ವೇದದ ಬಗ್ಗೆ ಸರಿಯಾದ ತಿಳುವಳಿ ಮಾಹಿತಿ ಇಲ್ಲ. ಹೀಗಾಗಿ ಜನರು ಆಯುರ್ವೇದ ಔಷಧ ಪದ್ಧತಿಯತ್ತ ಗಮನ ಹರಿಸುತ್ತಿಲ್ಲ. ದೇಹದ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರದೆ ಉತ್ತಮ ಆರೋಗ್ಯಕ್ಕೆ ಆಯುರ್ವೇದ ಸಹಕಾರಿಯಾಗುತ್ತದೆ ಎಂದರು.

ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ರಮೇಶ ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟೇಶ್ವರ ಭುವನೇಂದ್ರ ಟ್ರಸ್ಟ್‌ನ ಕಾರ್ಯದರ್ಶಿ ಕೆ.ದಿನೇಶ ಕಾಮತ್, ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್‌ನ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಸಂಸ್ಥೆಯ ಹಿರಿಯ ಸದಸ್ಯ ಎಂ.ರಾಮಕೃಷ್ಣ ಪೈ ಮುಳ್ಳಿಕಟ್ಟೆ ಹಾಗೂ ಕೋಟೇಶ್ವರದ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲೆಯ ವೈದ್ಯೆ ಡಾ.ಕಾತ್ಯಾಯಿನಿ ಉಪಸ್ಥಿತರಿದ್ದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ರಾಮನಾಥ ಚಿತ್ತಾಲ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ನಾಗರಾಜ ಖಾರ್ವಿ ವಂದಿಸಿದರು.

Leave a Reply