ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜೂ.21: ಇಲ್ಲಿನ ಪಟ್ಟಣ ಪಂಚಾಯತ್ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ನೂತನ ಇಂದಿರಾ ಕ್ಯಾಂಟಿನ್ ಸೇವೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.
ಬಳಿಕ ರೋಟರಿ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಈ ಕ್ಯಾಂಟೀನ್ ಆರಂಭಿಸಲಾಯಿತು. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ, ಇಷ್ಟು ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.






ಈ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕುಂದಾಪುರ ತಹಶಿಲ್ದಾರ್ ಪ್ರದೀಪ್ ಕುರುಡೇಕರ್, ಬೈಂದೂರು ತಹಶೀಲ್ದಾರ್ ಎಚ್. ರಾಮಚಂದ್ರಪ್ಪ, ಬೈಂದೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಅಜೇಯ ಭಂಡಾರ್‌ಕಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು, ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಾರ್ಕಳ, ಸದಸ್ಯರಾದ ಅರವಿಂದ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ.ಪಂ ನಾಮನಿರ್ದೇಶಿತ ಸದಸ್ಯರಾದ ಸದಾಶಿವ ಡಿ. ಪಡುವರಿ, ನಾಗರಾಜ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ
► ಅಧಿಕಾರ ಶಾಶ್ವತವಲ್ಲ. ಜನಸೇವೆ ಮಾತ್ರ ನಿರಂತರ ಪ್ರಕ್ರಿಯೆ. ಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – https://kundapraa.com/?p=86434 .
► ಬೈಂದೂರು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ. ನೂತನ ಅಧ್ಯಕ್ಷ ಭರತ್ ದೇವಾಡಿಗಗೆ ಅಧಿಕಾರ ಹಸ್ತಾಂತರ – https://kundapraa.com/?p=86471 .
ವಿದ್ಯಾರ್ಥಿಗಳಿಗೆ ಕ್ಯಾಂಟೀನ್ ಊಟ ಕೊಡಿಸಿದ ಸಚಿವರು
ಕ್ಯಾಂಟೀನ್ ಉದ್ಘಾಟಿಸಿ ವಾಪಸ್ ತೆರಳುವ ವೇಳೆ ಸ್ವಾಗತಿಸಲು ಸಾಲಾಗಿ ನಿಂತಿದ್ದ ವಿದ್ಯಾರ್ಥಿಗಳನ್ನು ಕಂಡ ಸಚಿವರು, ಮತ್ತೆ ಕಾರಿನಿಂದ ಕೆಳಗಿಳಿದು ಕ್ಯಾಂಟೀನ್ ಒಳಗೆ ಕರೆದೊಯ್ದು ಊಟ ನೀಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಕಾರಿನಲ್ಲಿ ಕುಳಿತಾಗ ಸಚಿವರೊಂದಿಗೆ ಸೆಲ್ಫಿ ಕ್ಲಿಕಿಸಿಕೊಳ್ಳಲು ಬಂದಾಗ, ಬನ್ನಿ ಕ್ಯಾಂಟೀನ್ ನಲ್ಲಿ ತಿಂಡಿ ತಿನ್ನಿ ಎಂದು ವಿದ್ಯಾರ್ಥಿನಿಯರನ್ನು ಕೈಹಿಡಿದು ಒಳಗೆ ಕರೆದುಕೊಂಡು ಬಂದರು.















