Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ. ಕುಂದಾಪುರ ಮೂಲದ ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ
    Uncategorized

    ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ. ಕುಂದಾಪುರ ಮೂಲದ ಇಬ್ಬರು ಸೆಲೆಬ್ರಿಟಿಗಳಿಗೆ ವಿಶೇಷ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ‘ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)’ ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ.

    Click Here

    Call us

    Click Here

    ಈ ಸಲದ ಕಾರ್ಯಕ್ರಮದ ವಿವರ ನೀಡುವ ಸಲುವಾಗಿ ಮಾಗಡಿ ರಸ್ತೆ ಕೊಟ್ಟಿಗೆಪಾಳ್ಯದ ‘ಸುದೀಕ್ಷಾ ಕನ್ವೆನ್ಷನ್ ಸೆಂಟರ್’ನಲ್ಲಿ ಆಯೋಜಿಸಿದ್ದ ‘ವಾಲ್ಗ’ ಸಮಾರಂಭದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್‌ ಶೆಟ್ಟಿ ಮಾಹಿತಿ ನೀಡಿದರು.

    ಎಂದಿನಂತೆ ಈ ಸಲ ಕುಂದಾಪ್ರ ಕನ್ನಡ ಹಬ್ಬವನ್ನು ಹಲವು ವಿಶೇಷತೆಗಳೊಂದಿಗೆ ಆಚರಿಸಲಿದ್ದು, ಪ್ರತಿ ಸಲದಂತೆ ಭಾರಿ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅದರಲ್ಲೂ ಈ ಬಾರಿ 5 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸಂಭ್ರಮದಲ್ಲಿ ದಿನವಿಡೀ ಕಾರ್ಯಕ್ರಮಗಳಿದ್ದು, ಮತ್ತೊಂದು ಅದ್ಧೂರಿಗೆ ಈ ಸಮಾರಂಭ ಸಾಕ್ಷಿಯಾಗಲಿದೆ. ಎರಡೂ ದಿನ ಕುಂದಾಪುರ ಮೂಲದ ಒಬ್ಬೊಬ್ಬರು ಅತಿಗಣ್ಯ ಸಾಧಕರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಆ ಕುರಿತ ವಿವರ, ಮುಖ್ಯ ಅತಿಥಿಗಳ ಮಾಹಿತಿ ಸದ್ಯದಲ್ಲೇ ನೀಡಲಾಗುವುದು ಎಂದು ಅವರು ತಿಳಿಸಿದರು.

    ವೇದಿಕೆಯಲ್ಲಿನ ವಿವಿಧ ಕಾರ್ಯಕ್ರಮಗಳಲ್ಲದೆ ಹೊರಾಂಗಣದಲ್ಲಿ ಹುಲಿವೇಷ, ಕೊರಗರ ಡೋಲು ವಾದನ, ಬಿಳಿ ಪಟಾಕಿ, ನವರಾತ್ರಿ ವೇಷ, ಹಗ್ಗಜಗ್ಗಾಟ ಮತ್ತು ವಿವಿಧ ಕ್ರೀಡೆಗಳಲ್ಲದೆ, ಕುಂದಾಪುರದ ಬಹುತೇಕ ಎಲ್ಲ ವಸ್ತುಗಳು ಸಿಗುವ ಕುಂದಾಪ್ರ ಸಂತೆ ಕೂಡ ಇರಲಿದೆ ಎಂದು ಅವರು ತಿಳಿಸಿದರು.

    ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಉದ್ಯಮಿ ಶಿವರಾಮ ಹೆಗ್ಡೆ, ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಜಿ.ಕೆ.ಶೆಟ್ಟಿ, ಕುಂದಾಪ್ರ ಕನ್ನಡ ಹಬ್ಬದ ರೂವಾರಿಗಳಾದ ಉದಯಕುಮಾರ್ ಶೆಟ್ಟಿ ಪಡುಕರೆ, ವಸಂತ ಗಿಳಿಯಾರ್, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ, ಶಿವಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸಮಾಲೋಚನಾ ಸಭೆ

    ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗಿರುವ ಕುಂದಾಪುರ ಕನ್ನಡ ಅಧ್ಯಯನ ಪೀಠದ ಕುರಿತು ಇದೇ ವೇಳೆ ಮಾಜಿ ಸಂಸದ ಕೆ‌.ಜಯಪ್ರಕಾಶ್ ಹೆಗ್ಡೆ ಅವರ ಸಮ್ಮುಖದಲ್ಲಿ ಸಮಾಲೋಚನಾ ಸಭೆ ನಡೆಯಿತು. ಹಿಂದಿನ ಕುಂದಾಪ್ರ ಕನ್ನಡ ಹಬ್ಬದ ಸಂದರ್ಭ ಈ ಪೀಠಕ್ಕೆ ಸರ್ಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1.5 ಕೋಟಿ ಅನುದಾನ ನೀಡಿದ್ದರು. ಅಧ್ಯಯನ‌ ಪೀಠದ ಮುಂದಿನ ಕಾರ್ಯಕ್ರಮಗಳ ಸಲುವಾಗಿ ಕುಂದಾಪುರದಲ್ಲಿ ಜನತೆಯ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲೂ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದರು. ಪೀಠದ ಸದಸ್ಯ ಕೆ‌.ಸಿ.ರಾಜೇಶ್ ಮುಂತಾದವರು ಉಪಸ್ಥಿತರಿದ್ದರು.

    ಕುಂದಾಪ್ರ ಕನ್ನಡ ಹಬ್ಬದ ವೈವಿಧ್ಯಮಯ ಕಾರ್ಯಕ್ರಮಗಳು

    * ಸಾವ್ರ್ ಹಣ್ಣಿನ್ ವಸಂತ
    * ಹೌದರಾಯನ ವಾಲ್ಗ
    * ಕುಂದಾಪ್ರದಡುಗೆ: ಉಪ್ಪಿನ್ಹೊಡಿ to ಮದಿಮನಿ ಊಟ
    * ಮೂಕಜ್ಜಿಯ ಕನಸುಗಳು: ಬೂಕ್ ತಕಣಿ ಬೂಕ್
    * ಸ್ವರ ಕುಂದಾಪ್ರ: ನಮ್ ಊರ್ಮನಿ ಮಕ್ಳ್ ಹಾಡುಹಸೆ
    * ಪಟ್ಟಾಂಗ: ಮಾತಿನ ಚಾವಡಿ
    * ಬಾರ್ಕೂರಿನ್ ಹಡ್ಗ್: ನೃತ್ಯ ನಾಟಕ (ಪ್ರಥಮ ಪ್ರದರ್ಶನ)
    * ಉದ್ಘಾಟನಾ ಪರ್ವ, ಸಮಾಪನ ಸಮಾರಂಭ: ಊರ ಗೌರವ (ಕುಂದಾಪುರ ಮೂಲದ ಇಬ್ಬರು ಅತಿಗಣ್ಯ ಸಾಧಕರಿಗೆ ಸನ್ಮಾನ)
    * ಈ ವರ್ಷದ ಬೃಹತ್ ಆಕರ್ಷಣೆ, ‘ಅಟ್ಟಣ್ಗಿ ಆಟ’: ಎರಡು ರಂಗಸ್ಥಳದ ಯಕ್ಷಗಾನ
    * ಸಾಹಿತಿ ವೈದೇಹಿ ಉದ್ಘಾಟನೆಗೆ ಮುಖ್ಯ ಅತಿಥಿ
    * ಪಿಳ್ಳಂಗೋವಿಯ ಚೆಲುವ ಕೃಷ್ಣನಾ: ಡಾ.ವಿದ್ಯಾಭೂಷಣರ ಗಾಯನ, ಅಮೆರಿಕದಲ್ಲಿ ಭಾರಿ ಯಶಸ್ವಿ ಕಂಡ ಕಾರ್ಯಕ್ರಮದ ಮಾದರಿ.
    * ಬಾಲಗೋಪಾಲ: ಮಕ್ಕಳ ಮಹಾಸಂಗಮದ ಯಕ್ಷನೃತ್ಯ
    * ಹಂದಾಡಿ ಕ್ವಿಜ್: ಕುಂದಾಪುರ ಕುರಿತು ಮನು ಹಂದಾಡಿ ಅವರ ರಸಪ್ರಶ್ನೆ
    * ಮಿಡ್ಕಣಿ: ಚೆಂದಾಮುಡಿ ಕುಂದಾಪ್ರದ ಸುರ-ಸುಂದರಿಯರ ಸೆಲೆಬ್ರಿಟಿ ಫ್ಯಾಷನ್ ಶೋ.
    * ಕಾಳಿಂಗ-ಕಾಳಿಂಗ: ಭಾಗವತ ಕಾಳಿಂಗ ನಾವಡ, ಗಾಯಕ ಪಿ.ಕಾಳಿಂಗ ರಾಯರ ಪದ-ಪದ್ಯಗಳ ಅನುರಣನ.
    * ರಾಸಲೀಲೆ: ಆಳ್ವಾಸ್ ವಿದ್ಯಾರ್ಥಿನಿಯರ ವಿಶೇಷ ಕಾರ್ಯಕ್ರಮ.
    * ಇಲ್ಕಾಣಿ ಕುಂದಾಪ್ರ: ಖುಷಿಯಲೆಗಳ ಕಡಲೂರು. ಇಡೀ ಕುಂದಾಪುರದ ಚಿತ್ರಣ ಇರುವ ಸಾಕ್ಷ್ಯಚಿತ್ರ.
    * ದ್ಯಸಿ: ತಾಂಗ್ರೆ ತಾಂಗ್ಲಿ, ವಿಶೇಷ ರೀತಿಯ ಲಕ್ಕಿಡಿಪ್.
    * ಸಂಗೀತ ಸಂಜೆ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    nineteen − eighteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.