ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನ.೨೮ ರಂದು ಕನಕದಾಸ ಜಯಂತಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಅವರು ಮಾತನಾಡಿ, ಕನಕದಾಸರು ತಮ್ಮ ಕೀರ್ತನೆ ಮತ್ತು ಸಾಹಿತ್ಯದ ಮೂಲಕ ಜಾತಿ.ಮತ, ಮೇಲು- ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು. ಉಪನ್ಯಾಸಕರುಗಳಾದ ಮಂಜುನಾಥ.ಕೆ.ಎಸ್, ಗೀತಾ ಜೋಷಿ, ಹರೀಶ್ ಕಾಂಚನ್, ಗಿರಿಜಾ ಕೊಡೇರಿ, ಜೆಸ್ಸಿ ಡಿಸಿಲ್ವ, ಶ್ರೀಲತಾ.ಕೆ ಉಪಸ್ಥಿತರಿದ್ದರು.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.










