ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂದೀಪ್ ಪೂಜಾರಿ ತ್ರಾಸಿ.
ಅವರನ್ನು ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಪರವಾಗಿ ತ್ರಾಸಿಯ ಡಾ. ಅಂಬೇಡ್ಕರ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಎಂ.ಡಿ. ಬಿಜೂರು, ಪಿಡಿಒ ಶೋಭಾ ಎಸ್., ಗ್ರಾಮ ಪಂಚಾಯತ್ ಸದಸ್ಯರು, ಗುಜ್ಜಾಡಿ ಪಶು ವೈಧ್ಯಾಧಿಕಾರಿ ಅರುಣ್ ಕೆ.ಪಿ., ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.










