ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಶನಿವಾರ ನಡೆಯಿತು.
ಶಾಲಾ ಪ್ರಾಕ್ತನ ವಿದ್ಯಾರ್ಥಿನಿ ಪದ್ಮಾ ಐತಾಳ್ ಪಡುಕೋಣೆ ಅವರು ನೋಟ್ ಪುಸ್ತಕದ ಪ್ರಾಯೋಜಕತ್ವವನ್ನು ವಹಿಸಿದ್ದರು. ಶಾಲೆಯ ಎಲ್‌ಕೆಜಿ ಯಿಂದ 8ನೇ ತರಗತಿಯವರೆಗಿನ ಎಲ್ಲಾ ಮಕ್ಕಳಿಗೂ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೋಟ್ ಪುಸ್ತಕ ವಿತರಿಸಿ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ, ಉಪಾಧ್ಯಕ್ಷೆ ಪೂರ್ಣಿಮಾ ಎಸ್. ಡಿಎಂಸಿ ಸದಸ್ಯರುಗಳು, ಪೋಷಕರು, ಸಹಶಿಕ್ಷಕರು ಹಾಗೂ ಗೌರವ ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಮಿತಾ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಶ್ಯಾಮಲಾ ಸ್ವಾಗತಿಸಿ, ಸುಜಾತಾ ವಂದಿಸಿದರು.
ಪೋಟೋ ಪೈಲ್ ನೇಮ್ : ೨೨ಜಿಎಎನ್೬ (ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು)















