ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ‘ಯುವ ಕಾಂಗ್ರೆಸ್ ಸಮಿತಿ ಬೈಂದೂರು ವಿಧಾನಸಭಾ ಕ್ಷೇತ್ರ’ ಇದರ ವತಿಯಿಂದ ‘ಯುವ ಸಂಕಲ್ಪ’ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಐರ್‌ಬೈಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಶೆಟ್ಟಿ ಮಾತನಾಡಿದರು.
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ, ಸಿದ್ದಾಪುರ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ಕುಲಾಲ್ ಜನ್ಸಾಲೆ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸವಿತಾ ಪೂಜಾರಿ, ಸಂಜೀವ್ ಪೂಜಾರಿ (ಗಾಂಧಿ ಪೂಜಾರಿ), ಕಿರಣ್ ಜನ್ಸಾಲೆ, ಆಕಾಶ್, ಕೃಷ್ಣ ಪೂಜಾರಿ, ಹರೀಶ್ ಪೂಜಾರಿ, ಸುರೇಶ್ ಪೂಜಾರಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.










