Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್: ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ
    alvas nudisiri

    ಆಳ್ವಾಸ್: ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ’ವಿಶ್ವ ತಂಬಾಕು ರಹಿತ ದಿನದ’ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿಎಸ್ ಆಚಾರ್ಯ ಸಭಾ ಭವನದಲ್ಲಿ ಬುಧವಾರ ನಡೆಯಿತು.

    Click Here

    Call us

    Click Here

    ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್‌ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ ಇಳಿಯುತ್ತಾನೆ. ಸಮಾಜದಲ್ಲಿ ಇಂತಹ ಕೃತ್ಯಕ್ಕೆ ವಿದ್ಯಾರ್ಥಿಗಳನ್ನೇ ಬಲೆ ಬೀಸಲಾಗುತ್ತದೆ.  ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು.

    ಮಕ್ಕಳ  ಇಂತಹ ಕೃತ್ಯದಿಂದ ತಂದೆ ತಾಯಂದಿರು ಅವಮಾನ ಎದುರಿಸುವಂತಾಗುತ್ತದೆ.  ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರತರಾಗಿರುವುದು ಹಾಗೂ ಒಳ್ಳೆಯ ಗೆಳೆಯರ ಸ್ನೇಹ ಬೆಳೆಸುವುದು ಅಗತ್ಯ ಎಂದರು. 

    ಮೊದಲ ಬಾರಿ ಡ್ರಗ್ಸ್ ಸೇವನೆ ಮಾಡಿದವರಿಗೆ ರೂ 10,000 ದಂಡ ಅಥವಾ 6 ತಿಂಗಳು ಅಥವಾ 1 ವರ್ಷ ಜೈಲು ಶಿಕ್ಷೆ, ಮತ್ತೆ ಅದು ಪುನರಾವರ್ತನೆಯಾದರೆ 5 ವರ್ಷ ಜೈಲು 1 ಲಕ್ಷ ದಂಡವನ್ನು ವಿಧಿಸಲಾಗುತ್ತದೆ. 

    ಕರ್ನಾಟಕ ಪೊಲೀಸ್ ಇಂದು ನವಮಾಧ್ಯಮವನ್ನು ಬಳಸಿ ಅಪರಾಧಿಗಳನ್ನು ಸುಲಭದಲ್ಲಿ ಪತ್ತೆಹಚ್ಚಬಲ್ಲರು ಎಂದು ತಿಳಿಸಿದರು. 

    Click here

    Click here

    Click here

    Click Here

    Call us

    Call us

    ಪೋಲೀಸ್ ಉಪನಿರೀಕ್ಷಕಿ ಪ್ರತಿಭಾ ಮಾತನಾಡಿ, ಭಾರತದಲ್ಲಿ ಸೈಬರ್ ಕ್ರೈಮ್‌ನಿಂದಾಗಿ ಜನರು ಒಂದು ನಿಮಿಷಕ್ಕೆ 1.30 ಲಕ್ಷದಿಂದ 1.50 ಲಕ್ಷದ ವರೆಗೆ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ.  ಸೈಬರ್ ಕ್ರೈಮ್‌ಗಳಲ್ಲಿ ಇನ್ವೆಸ್ಟ್ ಮೆಂಟ್ ಫ್ರಾಡ್, ಜಾಬ್ ಆಫರ್ ಫ್ರಾಡ್ , ಓಟಿಟಿ ಫ್ರಾಡ್, ಮನಿಲೋನ್ ಆಪ್ ಫ್ರಾಡ್ ಮುಖ್ಯವಾದುವು.  ನಮ್ಮ ವಯಕ್ತಿಕ ಮಾಹಿತಿಗಳನ್ನು ಗುಪ್ತವಾಗಿಡಲು ವಾಟ್ಸಪ್ಪ್‌ನ ಎರಡು ಹಂತದ  ಪರಿಶೀಲನೆಗೆ ಒಳಪಡಿಸುವುದು  ಉತ್ತಮ ಎಂದರು.

    ಪದವಿ ಪೂರ್ವ ಕಾಲೇಜಿನ ಮುಖ್ಯ ಆಪ್ತ ಸಮಾಲೋಚಕಿ ರೇನಿಟಾ ಡಿಸೋಜಾ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಗಾರ ನಡೆಸಿಕೊಟ್ಟರು. 

    ಕಾರ್ಯಕ್ರಮದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಝಾನ್ಸಿ ಪಿ. ಎನ್, ಕಲಾ ನಿಖಾಯದ ಡೀನ್ ವೇಣುಗೋಪಾಲ್ ಶೆಟ್ಟಿ, ಸಂಸ್ಥೆಯ ನಿಲಯ ಪಾಲಕರು ಹಾಗೂ ಕ್ಷೇಮಪಾಲಕರು ಇದ್ದರು. 

    ಉಪನ್ಯಾಸಕ ಶಿವಪ್ರಸಾದ ಬಿವಿ ನಿರೂಪಿಸಿ, ಅರುಣ್‌ಕುಮಾರ್ ಸ್ವಾಗತಿಸಿ, ಬಬಿತಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    5 + nine =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.