ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಂಗಳೂರು ಗ್ರಾಮದ ಶ್ರೀನಿವಾಸ ಅವರ ಪುತ್ರ ಶರತ್ (35) ಅವರು ಮಲಗಿದಲ್ಲೇ ಮೃತಪಟ್ಟಿದ್ದಾರೆ.
ಜೂ. 23ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದವರು ಜೂ. 24ರಂದು ಬೆಳಗಿನ ಜಾವ ಶರತ್ ತನಗೆ ಎದೆ ನೋವು ಬರುತ್ತಿದೆ ಎಂದು ಹೇಳಿ ವಾಂತಿ ಮಾಡಿಕೊಂಡರು. ಕೂಡಲೇಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಶರತ್ ಮೃತಪಟ್ಟಿರುವುದಾಗಿ ತಿಳಿಸಿದರು.
ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










