ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಕರಾವಳಿ ಕಾವಲು ಪೋಲಿಸ್ ಪಡೆ ಗಂಗೊಳ್ಳಿಯ ಸಬ್ ಇನ್ಸ್ಪೆಕ್ಟರ್ ಮುಕ್ತಾ ಬಾಯಿ ಅವರು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಪೋಕ್ಸೊ ಕಾಯಿದೆಯ ಬಗ್ಗೆ ತಿಳಿಸಿದರು.
ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ನಿದರ್ಶನಗಳ ಮೂಲಕ ಮಾಹಿತಿ ನೀಡಿದರು.
ಪೋಲಿಸ್ ಕಾನ್ ಸ್ಟೇಬಲ್ ರಾಘವೇಂದ್ರ ಪ್ರಸಾದ್ ಅವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ಸ್ವಾಗತಿಸಿದರು.










