Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್: ವಿದ್ಯಾಗಿರಿ ಆವರಣದಲ್ಲಿ ’ಸ್ಪೆಕ್ಟಾಕಲ್ʼ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ
    alvas nudisiri

    ಆಳ್ವಾಸ್: ವಿದ್ಯಾಗಿರಿ ಆವರಣದಲ್ಲಿ ’ಸ್ಪೆಕ್ಟಾಕಲ್ʼ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ’ಸ್ಪೆಕ್ಟಾಕಲ್ʼ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. 

    Click Here

    Call us

    Click Here

    ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಲಾಜಿಸ್ಟಿಕ್ಸ್ ಮತ್ತು ಶಿಪ್ಪಿಂಗ್ ವಲಯವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಕರವಾಗಿ ಕಾರ್ಯನಿರ್ವಹಿಸುತ್ತಿದ್ದು, ಆದರೆ ಈ ಕ್ಷೇತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ ಎಂದರು. 

    ನವಮಂಗಳೂರು ಬಂದರಿನ ಜೆಎಸ್‌ಡಬ್ಲ್ಯೂ ಕಂಟೇನರ್ ಟರ್ಮಿನಲ್‌ನೊಂದಿಗೆ ಅವರ ಅನುಭವವನ್ನು ಹಂಚಿಕೊಂಡ ಅವರು ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ ಕೊರತೆಯಿಂದ ಅನಿವಾರ್ಯವಾಗಿ ಗುಜರಾತ್ ಮತ್ತು ತಮಿಳುನಾಡಿನ ಸಿಬ್ಬಂದಿಯನ್ನು ನೇಮಿಸಬೇಕಾಯಿತು. ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ನವೀನ ಉದ್ಯಮಗಳಿಗೆ ಅನುಗುಣವಾಗಿ ರೂಪಿಸಿಕೊಳ್ಳಬೇಕು, ಎಂದು ಅಭಿಪ್ರಾಯಪಟ್ಟರು. 

    ಮುಖ್ಯವಾಗಿ ಈ ಉದ್ಯಮದಲ್ಲಿ ಕುತೂಹಲ, ಹೊಂದಿಕೊಳ್ಳುವಿಕೆ, ಸಮಸ್ಯೆ ಪರಿಹಾರ ಸಾಮರ್ಥ್ಯ, ಸ್ಪಷ್ಟ ಸಂವಹನ ಹಾಗೂ ತಂಡದ ಕಾರ್ಯತಂತ್ರ ಈ ಎಲ್ಲ ಕೌಶಲ್ಯಗಳು ನಿರ್ಣಾಯಕವಾಗಿರುತ್ತವೆ. ವಿದ್ಯಾರ್ಥಿಗಳು ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಲಾಜಿಸ್ಟಿಕ್ಸ್ ನಂತಹ ಉದಯೋನ್ಮುಖ ವಲಯಗಳನ್ನು ಅನ್ವೇಷಿಸಬೇಕು, ವಿಶೇಷವಾಗಿ ಕೃತಕ ಬುದ್ಧಿಮತ್ತೆ ಈ ಉದ್ಯಮವನ್ನು ಹಿಂದೆಂದಿಗಿಂತಲೂ ವೇಗವಾಗಿ ಮರುರೂಪಿಸುತ್ತಿದೆ ಎಂದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಕುರಿಯನ್, ಸ್ಪೆಕ್ಟಾಕಲ್  ವೇದಿಕೆಯ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ಮತ್ತು ಸಾಮರ್ಥ್ಯಗಳನ್ನು ವಿಶ್ಲೇಷಿಸಿ ಪ್ರೊಫೈಲ್ ತಯಾರಿಸುವ ಕೆಲಸವಾಗಬೇಕು.  ಇದರಿಂದ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು  ಇಂತಹ ವೇದಿಕೆಗಳನ್ನು ಬಳಸಿಕೊಂಡು ಹೊಸ ಆಲೋಚನೆಗಳನ್ನು ರೂಪಿಸಬೇಕು. ಕಲಿಕೆಯ ಪ್ರತಿ ಕ್ಷಣವನ್ನು ಪಾಠವಾಗಿ ಪರಿವರ್ತಿಸುವ ಮನೋಭಾವ ಹೊಂದಿರಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕುಶಿ ಶೆಟ್ಟಿ, ಮೊಹಮ್ಮದ್ ಸೌದ್, ಸಾಕ್ಷಿ, ಸುಮಿತ್ ಕುಂದರ್, ಮಾನಸ ಹಾಗೂ ಮೋಕ್ಷಿತ್ ವೇದಿಕೆಯ ನೂತನ ವಿದ್ಯಾರ್ಥಿ ಸಂಯೋಜಕರಾಗಿ ನಿಯೋಜಿಸಲಾಯಿತು.

    ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ನಿರ್ವಹಣಾ ವಿಭಾಗದ ಮುಖ್ಯಸ್ಥೆ ಸುರೇಖಾ ರಾವ್, ಸಹಾಯಕ ಪ್ರಾಧ್ಯಾಪಕಿ ಸೋನಿ, ಸುಹಾಸ್ ಶೆಟ್ಟಿ ವಿದ್ಯಾರ್ಥಿ ಸಂಯೋಜಕರಾದ ದೀಪಕ್, ಮಾನಸ ಮತ್ತು ವೈಶಾಖ್ ಇದ್ದರು. ಸಪ್ತಶ್ರೀ ನಿರೂಪಿಸಿ, ಇಶಿಕಾ ಅಂಚನ್ ಸ್ವಾಗತಿಸಿ, ಅಫ್ತಾಬ್ ರಹ್ಮಾನ್ ಅತಿಥಿಯನ್ನು ಪರಿಚಯಿಸಿ, ರಶ್ಮಿ ಶೆಟ್ಟಿ ವಂದಿಸಿದರು.

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    20 + 18 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.