ಕುಂದಾಪ್ರ ಡಾಟ್ ಕಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕಾಳಾವರ ಗ್ರಾಮದ ನಿವಾಸಿ ಸ್ವಾತಿ (30) ಅವರು ಇಲಿ ಪಾಷಣ ಸೇವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
9 ವರ್ಷದ ಹಿಂದೆ ಬಸ್ರೂರಿನ ಸತೀಶ್ ಅವರೊಂದಿಗೆ ಮದುವೆಯಾಗಿದ್ದು, ದಂಪತಿಗೆ 8 ವರ್ಷದ ಮಗನಿದ್ದಾನೆ.
ಜೂ.27ರಂದು ಬೆಳಗ್ಗೆ ಮನೆಯಲ್ಲಿರುವಾಗ ವಿಷ ಪದಾರ್ಥ ಸೇವಿಸಿ ಅವರು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮೃತರ ತಾಯಿ ನಾಗರತ್ನ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










