ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧಿಕೃತ ವೆಬ್‌ಸೈಟ್ ಹಾಗೂ ನೂತನ ಗ್ರಂಥಾಲಯದ ಉದ್ಘಾಟನೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.
ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಸಾಲ್ಗದ್ದೆ ಶಶಿಧರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೊಡು, ಗೋಕುಲ್ ಶೆಟ್ಟಿ ಉಪ್ಪುಂದ, ಕರುಣಾಕರ್ ಶೆಟ್ಟಿ ತಗ್ಗರ್ಸೆ, ಮಾಜಿ ಅಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ ಪದಾಧಿಕಾರಿಗಳಾದ ಚುಚ್ಚಿನಾರಾಯಣ ಶೆಟ್ಟಿ ನಿತಿನ್ ಶೆಟ್ಟಿ ಬೈಂದೂರು, ಜೈರಾಮ್ ಶೆಟ್ಟಿ ಗಂಟಿಹೊಳೆ, ಜೈರಾಮ್ ಶೆಟ್ಟಿ ಬಿ., ಸಂತೋಷ್ ಶೆಟ್ಟಿ ಬೈಂದೂರು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ದಿವಾಕರ್ ಶೆಟ್ಟಿ ನೆಲ್ಯಾಡಿ, ದಿವಾಕರ್ ಶೆಟ್ಟಿ ಉಪ್ಪುಂದ, ಮಹಿಳಾ ಪದಾಧಿಕಾರಿಗಳಾದ ಮಮತಾ ಶೆಟ್ಟಿ ಉಷಾ ಶೆಟ್ಟಿ ಕುಂದಾಪುರದ ಫೋರ್ಥ್ ಫೋಕಸ್ ಸಂಸ್ಥೆಯ ನಿರ್ದೇಶಕರಾದ ವಿ.ಗೌತಮ್ ನಾವಡ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿತಿನ್ ಶೆಟ್ಟಿ ಬೈಂದೂರು ಸ್ವಾಗತಿಸಿದರು. ಜಯರಾಮ್ ಶೆಟ್ಟಿ ವಂದಿಸಿದರು.















