ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿ ಕಡಲ ತೀರದಲ್ಲಿ ಸಮುದ್ರ ಪೂಜೆ ಶುಕ್ರವಾರ ನಡೆಯಿತು.
ಅರ್ಚಕ ರವೀಶ್ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡಿತು.
ಮುಂದಿನ ಮೀನುಗಾರಿಕಾ ಋತುವಿನಲ್ಲಿ ಸಮೃದ್ಧ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಯಾವುದೇ ಅಪಾಯ ಎದುರಾಗದಿರಲಿ, ಪ್ರಕೃತಿ ವಿಕೋಪಗಳು ಬಾರದಿರಲಿ, ಎಲ್ಲಾ ಮೀನುಗಾರರ ಬಾಳಿನಲ್ಲಿ ಸುಖ ಶಾಂತಿ ನೆಮ್ಮದಿ ಇರುವಂತಾಗಲಿ, ಸಮಸ್ತ ಮೀನುಗಾರರಿಗೆ ಒಳ್ಳೆಯದಾಗಲಿ ಎಂದು ಸಮುದ್ರರಾಜ ಹಾಗೂ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಖಾರ್ವಿ, ಸಂಘದ ಪದಾಧಿಕಾರಿಗಳು, ಮೀನುಗಾರರು ಉಪಸ್ಥಿತರಿದ್ದರು.










