ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ನ್ನು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರತ್ತು ಬಾಯಿ ಜನತಾ ಪ್ರೌಢಶಾಲೆ ಬೈಂದೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಅವರು ಜೀವನದಲ್ಲಿ ಶಿಸ್ತು, ಸಂಯಮ, ಸಮರ್ಪಣಾ ಮನೋಭಾವವನ್ನು ತಮ್ಮಲ್ಲಿ ಅಳವಡಿಸಿಕೊಂಡು ಭಾವನಾತ್ಮಕ, ಪ್ರಜ್ಞಾವಂತ ನಾಗರಿಕರಾಗಿ ಬದುಕನ್ನು ಸಾಗಿಸುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಅಂಡ್ ಕಲ್ಚರಲ್ ಟ್ರಸ್ಟ್ ಇದರ ಕಾರ್ಯದರ್ಶಿಯವರಾದ . ಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾಕಾಂತ ರೇವಣ್ಣಕರ್ ಉಪಸ್ಥಿತರಿದ್ದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕೋಳಿ ನೃತ್ಯ ಖ್ಯಾತಿಯ ಅಶೋಕ್ ಪೊಳಲಿ ಇವರು ನೃತ್ಯ ಪ್ರದರ್ಶನವನ್ನು ನೀಡಿದರು.
ವಿದ್ಯಾರ್ಥಿನಿಯರಾದ ರಿಯಾ ಸ್ವಾಗತಿಸಿ, ಚಿರಂತನಾ ವಂದಿಸಿ, ದೀಕ್ಷಾ ಪೈ ಅತಿಥಿಗಳನ್ನು ಪರಿಚಯಿಸಿ, ಅನೌಷ್ಕ ಕಾರ್ಯಕ್ರಮವನ್ನು ನಿರೂಪಿಸಿದರು.















