ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬ್ಯಾಗಗಳ ಬಳಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಅದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳನ್ನು ಜನರಿಗೆ ತಿಳಿಸಿ ಆದಷ್ಟು ಬಟ್ಟೆ ಬ್ಯಾಗ್ ಗಳನ್ನು ಉಪಯೋಗಿಸಿ ಪರಿಸರದ ಮೇಲಾಗುವ ಹಾನಿಯನ್ನು ಕಡಿಮೆ ಮಾಡಿ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಎಲ್ಲರೂ ಕೈಜೋಡಿಸಬೇಕೆನ್ನುವ ಉದ್ದೇಶದಿಂದ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಉಚಿತವಾಗಿ ಬಟ್ಟೆಯಿಂದ ತಯಾರಿಸಿದ
ಬ್ಯಾಗ್ ಗಳನ್ನು ವಿತರಿಸಿ ಜನ ಜಾಗೃತಿಯನ್ನು ಮೂಡಿಸಿದರು.
ಈ ಕಾರ್ಯಕ್ರಮದ ಉಸ್ತುವಾರಿಯನ್ನು ನಾಗವೇಣಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂ.ಬಿ.ಎ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರ ಉಪನ್ಯಾಸಕರು ಉಪಸ್ಥಿತರಿದ್ದರು.










