ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿಯಲ್ಲಿ 500 ಕೋಟಿ ಉಚಿತ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೈಂದೂರಿನಲ್ಲಿಯೂ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.

ಬೈಂದೂರು ತಹಶಿಲ್ದಾರರ ಕಛೇರಿ ಎದುರು ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಬಸ್‌ನ ಚಾಲಕ ಮತ್ತು ನಿರ್ವಾಹಕರನ್ನು ಗೌರವಿಸಲಾಯಿತು.

ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮೋಹನ್ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಾರ್ಯದರ್ಶಿ ಜಗದೀಶ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ನಾಗರಾಜ್ ಗಾಣಿಗ ಬಂಕೇಶ್ವರ, ಸದಾಶಿವ ಪಡುವರಿ, ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ ಪಡುವರಿ, ಯುವ ಕಾಂಗ್ರೆಸ್ ಅಧ್ಯಕ್ಷ ಭರತ್ ದೇವಾಡಿಗ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್ ಬೈಂದೂರು, ರೈತ ಘಟಕ ವೀರಭದ್ರ ಗಾಣಿಗ, ಗ್ಯಾರಂಟಿ ಸಮಿತಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.










