Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಉಡುಪಿ: ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರತಿ ಹಂತದಲ್ಲಿ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ.

    Click Here

    Call us

    Click Here

    ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೇಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಫರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್‌ನಡಿ ಆರ್.ಎಸ್.ಕೆ ಅಥವಾ ಸಿಟಿಝನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ ಬಳಸಿಕೊಂಡು ಆನ್‌ಲೈನ್ ಮೂಲಕ ಆಗಸ್ಟ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

    ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಕನಿಷ್ಠ 1 ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದಿರುವ ಹಾಗೂ ರೆವಿನ್ಯೂ ದಾಖಲೆಯ ಪ್ರಕಾರ ಖಾತೆ ಹೊಂದಿರುವ ಸ್ವತಃ ಬೇಸಾಯದಲ್ಲಿ ತೊಡಗಿರುವ, ಕ್ರಿಯಾಶೀಲ ರೈತರಾಗಿರುವ ಕುಟುಂಬದ ಒಬ್ಬರು ಮಾತ್ರ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಆನ್‌ಲೈನ್ ಮೂಲಕ ನೋಂದಾಯಿಸುವ ರೈತರು ಹಾಗೂ ರೈತ ಮಹಿಳೆಯರು ಇಲಾಖೆಯ ಮಾರ್ಗಸೂಚಿಯನ್ವಯ ನಿಗಧಿಪಡಿಸುವ ಸ್ಪರ್ಧಾತ್ಮಕ ಇಳುವರಿ ಮಟ್ಟಕ್ಕಿಂತ ಹೆಚ್ಚಿನ ಇಳುವರಿ ಪಡೆದಲ್ಲಿ ಮಾತ್ರ ಸ್ಪರ್ಧೇಯಡಿ ಬಹುಮಾನಕ್ಕೆ ಪರಿಗಣಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    sixteen + 10 =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.