ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆ ವತಿಯಿಂದ ಕೇಂದ್ರ ಸರಕಾರದ ಯೋಜನೆ ಜನಸುರಕ್ಷಾ ಅಭಿಯಾನವು ಮಂಗಳವಾರ ಕೆರ್ಗಾಲ್ ಗ್ರಾಮ ಪ್ರಂಚಾಯತ್ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕೆರ್ಗಾಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಅವರು ಮಾತನಾಡಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ನವೋದಯ ಸ್ವಸಹಾಯ ಗಂಪುಗಳಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸುವುದರ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಜನಸುರಕ್ಷಾ ಯೋಜನೆಯನ್ನು ಮನೆ ಮನೆಗೆ ತಲುಪಿಸುವುದರಲ್ಲಿ ಹೆಚ್ಚು ಮುತುವರ್ಜಿ ವಹಿಸಿರುವುದು ಶ್ಲಾಘನಾರ್ಹ ಎಂದರು.
ಎಸ್‌ಸಿಡಿಸಿಸಿ. ಬ್ಯಾಂಕ್ ಉಪ್ಪುಂದ ಶಾಖಾ ವ್ಯವಸ್ಥಾಪಕರಾದ ಜಿ. ಶಂಕರ ಶೆಟ್ಟಿಯವರು ಪ್ರಸ್ತಾವನೆಯಲ್ಲಿ ಕೇಂದ್ರ ಸರಕಾರದ ಜನ ಸುರಕ್ಷಾ ಯೋಜನೆಯನ್ನು ಕೆರ್ಗಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ಆಳವಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಕೆರ್ಗಾಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯ ಖಾರ್ವಿ ಗ್ರಾಮ ಪಂಚಾಯತ್, ಸದಸ್ಯ ವಿನೋದ ದೇವಾಡಿಗ, ಗ್ರಾಮ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಕೆರ್ಗಾಲ್ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.,
ಸಿಬ್ಬಂದಿ ಚೈತ್ರಾರವರು ಪ್ರಾರ್ಥಿಸಿ, ಗೋಪಾಲ ಪೂಜಾರಿ ವಂದಿಸಿದರು. ಸುನೀತಾ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.















