Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಕಾರ್ಯಗಾರ
    ಊರ್ಮನೆ ಸಮಾಚಾರ

    ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಕಾರ್ಯಗಾರ

    Updated:17/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    “ಸಂಖ್ಯಾಶಾಸ್ತ್ರವು ಬಹುತೇಕ ಉದ್ಯೋಗಗಳಲ್ಲಿ ಅಗತ್ಯವಿದೆ. ವ್ಯವಹಾರ, ಆರೋಗ್ಯ, ತಂತ್ರಜ್ಞಾನ, ಸರ್ಕಾರ, ಶಿಕ್ಷಣ,ದತ್ತಾಂಶ ವಿಶ್ಲೇಷಣೆ, ಮಾರುಕಟ್ಟೆ ವಿಶ್ಲೇಷಣೆ, ಹಣಕಾಸು ಊಹೆ ಮುಂತಾದ ಕ್ಷೇತ್ರಗಳಲ್ಲಿ ಇದು ಉಪಯೋಗಿಯಾಗುತ್ತದೆ. ದಿನನಿತ್ಯದ ಸಮೀಕ್ಷೆಗಳು, ಸುದ್ದಿಗಳಲ್ಲಿನ ಅಂಕಿಅಂಶಗಳು ಮತ್ತು ವಿಜ್ಞಾನ ವರದಿಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಂಖ್ಯಾಶಾಸ್ತ್ರ ಸಹಾಯವಾಗುತ್ತದೆ. ಆದರೆ ಇಂದು ಇಂತಹ ಅಮೂಲ್ಯ ವಿಷಯವನ್ನು ವಿದ್ಯಾರ್ಥಿಗಳು ಆಸೆ ಪಟ್ಟು ಓದದೇ, ಇರುವುದರಿಂದ ಮತ್ತು ಸಮಾಜದಲ್ಲಿ ಒಲವು ಕೂಡ ಕಡಿಮೆಯಾಗುತ್ತಿರುವುದು ಸಂಖ್ಯಾಶಾಸ್ತ್ರ ಮೈನರ್ ವಿಷಯ ಆಗುತ್ತಿರುವುದು ಅತ್ಯಂತ ವಿಷಾದನೀಯ” ಎಂದು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಕಳವಳ ವ್ಯಕ್ತಪಡಿಸಿದರು.

    Click Here

    Call us

    Click Here

    ಉಡುಪಿ ಜಿಲ್ಲಾ ಸಂಖ್ಯಾಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಜಂಟಿ ಆಶ್ರಯದಲ್ಲಿ ಬುಧವಾರ ಜನತಾ ಪಿಯು ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ವಿಷಯ ಬೋಧಿಸುತ್ತಿರುವ ಉಪನ್ಯಾಸಕರುಗಳಿಗೆ ನವೀನ ಬೋಧನಾ ತಂತ್ರಗಳ ಮಾಹಿತಿ ಕಾರ್ಯಾಗಾರ ಮತ್ತು ವಿದ್ಯಾರ್ಥಿಗಳಲ್ಲಿ ಸಂಖ್ಯಾಶಾಸ್ತ್ರ ವಿಷಯದಲ್ಲಿ ಆಸಕ್ತಿ ಕೆರಳಿಸುವ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಕುರಿತು ಪೋಸ್ಟರ್ ಮೇಕಿಂಗ್ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಸಂಖ್ಯಾಶಾಸ್ತ್ರದ ಮಹತ್ವ ಕುರಿತು ಅರಿವು ಮೂಡಿಸಬೇಕು ಅದೇ ರೀತಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯ, ಶಿಸ್ತು, ವ್ಯವಹಾರ ಮುಂತಾದ ಸಂಗತಿಗಳ ಕುರಿತು ತಿಳಿ ಹೇಳಿ ಆದರ್ಶ ಜೀವನ ನಡೆಸುವಂತೆ ಪ್ರೇರೆಪಿಸಬೇಕು ಎಂದು ಹೇಳಿದರು.

    ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪಿಯು ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಸಂಖ್ಯಾಶಾಸ್ತ್ರದ ಇಂದಿನ ಕಾರ್ಯಗಾರದಲ್ಲಿ ಸಂಖ್ಯಾಶಾಸ್ತ್ರದ ಹೊಸ ಸಾಧ್ಯತೆಗಳ ಬಗ್ಗೆ ವಿನೂತನ ಸ್ಪರ್ಧೆಗಳನ್ನು ಏರ್ಪಡಿಸಿದ್ದು ಶ್ಲಾಘನೀಯ ಸಂಗತಿ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಸಂಖ್ಯಾಶಾಸ್ತ್ರ ಉಪನ್ಯಾಸಕರ ಸಂಘ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಸಂಖ್ಯಾಶಾಸ್ತ್ರ ವಿಷಯವನ್ನು ಬೆಳೆಸುವ ನಿಟ್ಟಿನಲ್ಲಿ ಸಂಖ್ಯಾಶಾಸ್ತ್ರ  ಪೋರಂ ಚಟುವಟಿಕೆಗಳಿಗೆ ಪ್ರತಿ ವರ್ಷವೂ ಇಪ್ಪತ್ತೈದು ಸಾವಿರ ರೂಪಾಯಿಗಳನ್ನು ನೀಡುವುದಾಗಿ ಭರವಸೆ ನೀಡಿದರು.

    ಸಂಪನ್ಮೂಲ ವ್ಯಕ್ತಿ ಉಡುಪಿ ಶ್ಯಾಮಿಲಿ ಪಿಯು ಕಾಲೇಜಿನ ಪ್ರಾಂಶುಪಾಲ ರಾಜ ಮೋಹನ್ ಸಂಖ್ಯಾಶಾಸ್ತ್ರ ಉಪನ್ಯಾಸಕರಿಗೆ ನವೀನ ಬೋಧನಾ ತಂತ್ರಗಳ ಮಾಹಿತಿ ಕಾರ್ಯಾಗಾರ  ನಡೆಸಿಕೊಟ್ಟರು.

    ಕಾರ್ಯಕ್ರಮದಲ್ಲಿ ಆರೋಗ್ಯದಲ್ಲಿ ಸಂಖ್ಯಾಶಾಸ್ತ್ರ ಎಂಬ ವಿಷಯದ ಕುರಿತು ಪೋಸ್ಟರ್ ಮೇಕಿಂಗ್ ಸ್ಪರ್ಧೆ ಏರ್ಪಡಿಸಿ ವಿಜೇತರಾದ ಪೂರ್ಣಪ್ರಜ್ಞಾ ಕಾಲೇಜಿನ ಸಿಯಾ ಶೆಟ್ಟಿ, ಭಂಡಾರಕರ್ಸ್ ಕಾಲೇಜಿನ ಅಮೂಲ್ಯ ಹಾಗೂ ಎಸ್. ಆರ್.ಪಿಯು. ಕಾಲೇಜಿನ ಸುಹೇರ ನವಾಜ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.

    Click here

    Click here

    Click here

    Click Here

    Call us

    Call us

    ನಿರ್ಣಾಯಕರಾಗಿ ನಯನಾ ಲೋಬೋ, ಪವನಕುಮಾರ ಹಾಗೂ ಶರತ್ ರಾವ್ ಕಾರ್ಯ ನಿರ್ವಹಿಸಿದರು. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ  ಅತೀ ಹೆಚ್ಚು ಅಂಕ ಪಡೆದು ಸಂಖ್ಯಾಶಾಸ್ತ್ರ ವಿಷಯದಲ್ಲಿ ನೂರು ಅಂಕ ಪಡೆದ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ  ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

    ಕಾರ್ಯಕ್ರಮದಲ್ಲಿ ಸಂಖ್ಯಾಶಾಸ್ತ್ರ ಉಪನ್ಯಾಸಕರ ಸಂಘದ ಉಪಾಧ್ಯಕ್ಷೆ ನೇತ್ರಾವತಿ ಬುಡ್ಡಿ ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ನಾಗಶ್ವೇತ ಪ್ರಾರ್ಥಿಸಿ, ಮಣಿಪಾಲ ಜ್ಞಾನಸುಧಾ ಪಿಯು ಕಾಲೇಜಿನ ಉಪನ್ಯಾಸಕ ರವಿ ಜಿ. ನಿರೂಪಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿಗಾರ್ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಈಶ್ವರ್ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    sixteen + 15 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.