ಹಂಗಳೂರು: ನಿವೇಶನ ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ನಿವೇಶನ ರಹಿತರ ಸಮಾವೇಶ

Call us

Call us

Call us

ಕುಂದಾಪುರ: ಹಂಗಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರು ಸಲ್ಲಿಸಿದ ಒಟ್ಟು 336 ಅರ್ಜಿಗಳನ್ನು ಪರಿಶೀಲಿಸಿ, ಅಂತಿಮ ನಿವೇಶನ ರಹಿತರ ಪಟ್ಟಿ ಸಿದ್ಧ ಪಡಿಸಲಾಗಿದ್ದರೂ ಕುಂದಾಪುರ ತಹಶೀಲ್ದಾರ್ ಕಛೇರಿಯಿಂದ ಕಂದಾಯ ಸರಕಾರಿ ಭೂಮಿಯನ್ನು ಗುರುತಿಸಿ – ಹಕ್ಕು ಪತ್ರ ವಿತರಣೆ ಮಾಡುವುದಕ್ಕೆ ಕ್ರಮ ವಹಿಸಿದ ಸರಕಾರದ ಬಡವರ ವಿರೋಧಿ ಧೋರಣೆ ಖಂಡಿಸಿ ಪೆಬ್ರವರಿ ತಿಂಗಳಲ್ಲಿ ತಹಶೀಲ್ದಾರ್ ಕಛೇರಿ ಎದುರು ಜರಗುವ ಅನಿರ್ಧಿಷ್ಟಾವಧಿ ಧರಣಿ ಮುಷ್ಕರ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯದರ್ಶಿ ವೆಂಕಟೇಶ ಕೋಣಿ ಹೇಳಿದರು.

Call us

Click Here

ಹಂಗಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡನಿವೇಶನ ರಹಿತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ನಿವೇಶನ ರಹಿತರ ಭೂಮಿ ಹಕ್ಕಿನ ಹೋರಾಟಕ್ಕೆ ತಾಲೂಕಿನಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಕೃಷಿ ಕೂಲಿಕಾರರ ಸಂಘದ ತಾಲೂಕು ಅಧ್ಯಕ್ಷ ಪಡುಕೋಣೆ, ಯು. ದಾಸಭಂಡಾರಿ, ಎಚ್. ನರಸಿಂಹ, ಸುರೇಶ ಕಲ್ಲಾಗರ, ಕುಶಲಿ, ಪದ್ಮಾವತಿ ಶೆಟ್ಟಿ, ನಾಗರತ್ನ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ತಾಲೂಕು ಒಕ್ಕೂಟದ ಉಡುಪಿ ಜಿಲ್ಲಾ ಸಮಿತಿ ಮುಖಂಡ ವಿಲ್ಸನ್ ಹಂಗಳೂರು ಉಪಸ್ಥಿತರಿದ್ದರು.

Leave a Reply