ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ರಾಮಚಂದ್ರ ಶೇರುಗಾರ್ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ರಾಮಚಂದ್ರ ಶೇರುಗಾರ್ ಕಳೆದ 28 ವರ್ಷಗಳಿಂದ ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇನ್ನು ಒಂದು ವಾರದಲ್ಲಿ ಪ್ರಮೋಷನ್ ಆಗಿ ಎಎಸ್ ಐ ಆಗುವ ಅರ್ಹತೆ ಹೊಂದಿದ್ದರು.
ರಾಮಚಂದ್ರ ಶೇರುಗಾರ್ ಅಕಾಲಿಕ ಸಾವಿನಿಂದ ಗಂಗೊಳ್ಳಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಪವನ ನಾಯಕ್, ಬಸವರಾಜ್ ಕನ್ ಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.















