ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ.ಬಿ. ಹೆಗ್ಡೆ ಅವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಸಹ ಪ್ರಾಧ್ಯಾಪಕರಾದ ಸ್ವಾತಿ ಜಿ. ರಾವ್ ವಂದಿಸಿ, ನಿರೂಪಿಸಿದರು.










