ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೈಂದೂರಿನ ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ ಅವರ ಮಾಲಕತ್ವದ ಮುಳ್ಳುಗುಡ್ಡೆ ಸೌಪರ್ಣಿಕ ಹೆಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಗಳಿಗೆ ಕೈಗಾರಿಕಾ ಭೇಟಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ/ Bridge Course ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಹಮ್ಮಿಕೊಂಡಿದ್ದು. ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗಗಳ ವಿಷಯಗಳನ್ನು ಅರ್ಥೈಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗಗಳ ಜಂಟಿ ಆಶ್ರಯದಲ್ಲಿ ಕೈಗಾರಿಕಾ ವಲಯಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಖಾನೆಯ ಮ್ಯಾನೇಜರಾದ ದಯಾನಂದ ಗಾಣಿಗ aವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಸತೀಶ ಕಾಂಚನ್, ದೀಪಾ ಪೂಜಾರಿ, ಪೂಜಾ ಕುಂದರ್, ಸುಹಾಸ್ ಜಟ್ಟಿಮನೆ, ಕಿಶೋರ್ ಕೃಷ್ಣ ಮರಕಾಲ ಹಾಗೂ ನಿರ್ವಹಣಾ ವಿಭಾಗದ ಪ್ರಾಧ್ಯಾಪಕಿ ವಿಶಾಲಾಕ್ಷಿ ಉಪಸ್ಥಿತರಿದ್ದರು.










