ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಮತ್ತು ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕರಿಗಾಗಿ ಸಿಪಿಆರ್ ತರಬೇತಿ ಕಾರ್ಯಕ್ರಮವು ಸರಸ್ವತಿ ವಿದ್ಯಾಲಯದಲ್ಲಿ ನಡೆಯಿತು.
ಮಣಿಪಾಲದ ನರ್ಸಿಂಗ್ ಕಾಲೇಜಿನ ಮೆಡಿಕಲ್ ಮತ್ತು ಸರ್ಜಿಕಲ್ ನರ್ಸಿಂಗ್ ವಿಭಾಗದ ವೈದ್ಯೆ ಡಾ. ಮೆಲಿಟ್ ಶೈಲಿನಿ ಸಿಪಿಆರ್ ಬಗ್ಗೆ ತರಬೇತಿಯನ್ನು ನೀಡಿದರು.
ಸಿಪಿಆರ್ ನೀಡುವ ಮೊದಲು ವ್ಯಕ್ತಿಗೆ ಅದರ ಅಗತ್ಯತೆಯನ್ನು ಖಚಿತಪಡಿಸಿಕೊಂಡು ಸಿಪಿಆರ್ ಪ್ರಕ್ರಿಯೆಯನ್ನು ನಡೆಸಬೇಕು. ಇದರ ಬಗ್ಗೆ ಅರಿವನ್ನು ಹೊಂದುವುದರಿಂದ ತುರ್ತು ಸಂದರ್ಭಗಳಲ್ಲಿ ಹಲವಾರು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕರು ಈ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ವಂದಿಸಿದರು.










