ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಪ್ರಾಯೋಜಿತ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಇಂಟರ‍್ಯಾಕ್ಟ್ ಕ್ಲಬ್ ಕ್ಲಬ್‌ನ 2025-26ನೇ ಸಾಲಿನ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಒಳಾಂಗಣದಲ್ಲಿ ಶುಕ್ರವಾರ ನಡೆಯಿತು.
ಇಂಟರ‍್ಯಾಕ್ಟ್ ಕ್ಲಬ್‌ನ 2025-26ನೇ ಸಾಲಿನ ಅಧ್ಯಕ್ಷೆ ಪ್ರಥ್ವೀ ಚಿತ್ತಾಲ್ ಹಾಗೂ ಪದಾಧಿಕಾರಿಗಳಿಗೆ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಅವರು ಪದಪ್ರದಾನ ನೆರವೇರಿಸಿ ಶುಭ ಹಾರೈಸಿದರು.
ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಕೋ-ಆರ್ಡಿನೇಟರ್ ಲವಿನಾ ಸಿಕ್ವೇರಾ, ಗಂಗೊಳ್ಳಿ ರೋಟರಿ ಕಾರ್ಯದರ್ಶಿ ರಾಮನಾಥ ಚಿತ್ತಾಲ್, ಶಿಕ್ಷಕರು, ರೋಟರಿ ಸದಸ್ಯರು, ಇಂಟರ‍್ಯಾಕ್ಟ್ ಕ್ಲಬ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.










