ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 109ನೇ ತಿಂಗಳ ಕಾರ್ಯಕ್ರಮದಲ್ಲಿ ಮನ್ವಿತಾ ಎಸ್., ಶ್ರೀಮತಿ ಶೇಖರ್ ಹಾಗೂ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ 2024-25ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸಮೀಕ್ಷಾ ಅವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು.
ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ, ವಸಂತಿ ಪಂಡಿತ್, ಸೂರ್ಯಕಾಂತ್, ಶ್ರೀಮತಿ ಶೇಖರ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು.
ಬಾಲ ಪ್ರತಿಭೆ ಮನ್ವಿತಾ ಎಸ್. ಅವರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನಂತರ ಏಕನಾಥೇಶ್ವರಿ ಭಜನಾ ಮಂಡಳಿ ಕುಂದೇಶ್ವರ, ಕುಂದಾಪುರ ಇದರ ಸದಸ್ಯರು ಭಜನ್ ಸಂಧ್ಯಾ ಕಾರ್ಯಕ್ರಮ ನಡೆಸಿಕೊಟ್ಟರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರ್ವಹಿಸಿದರು.










