ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಅಂಪಾರು ಮೂಡುಬಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಶಾಲಾ ವಾಹನ ಅಕ್ಷರ ರಥ 2 ಇದರ ಪೂಜಾ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕಿಣಿ ಅವರ ಉಪಸ್ಥಿತಿಯಲ್ಲಿ ನೆರವೇರಿತು.
ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ ಶೆಟ್ಟಿ ಹೆಚ್., ಕಾರ್ಯದರ್ಶಿ ರಮೇಶ್ ಕನ್ನಲಿ, ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಮೂಡುಬಗೆ ಅವರು ಶಾಲಾ ವಾಹನ ಅಕ್ಷರ ರಥ 2ನ್ನು ಕೊಡುಗೆಯಾಗಿ ಶಾಲಾ ಅಭಿವೃದ್ಧಿ ಸಮಿತಿಯವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ದಿನಕರ್ ಶೆಟ್ಟಿ ಶಾನ್ಕಟ್ಟು ಶಾಲೆಯ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಭಾವತಿ ನಾಗರಾಜ್ ನಾಯ್ಕ್, ಅಂಪಾರು ಗ್ರಾಮ ಪಂಚಾಯತ್ ಸದಸ್ಯರಾದ ಕಿರಣ್ ಹೆಗ್ಡೆ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ವನಜ ಮೊಗವೀರ, ಸದಸ್ಯರಾದ ಶಕೀಲಾ ಮಹೇಂದ್ರ ಭೋವಿ, ಜಯಂತಿ ಶಂಕರ್ ನಾಯ್ಕ್ ಶೇಡಿನ್ ಕೊಡ್ಲು, ಅಂಪಾರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ವೆಂಕಟ್ರಾಯ ಕಿಣಿ, ನಿವೃತ್ತ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಶೆಟ್ಟಿ ಶಾನ್ಕಟ್ಟು, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಮಾಜಿ ಎಸ್‌ಡಿಎಂಸಿ ಉಪಾಧ್ಯಕ್ಷರದ ಭಾರತಿ ಶೆಟ್ಟಿ ಶಾಲಾ ಮುಖ್ಯ ಶಿಕ್ಷಕರಾದ ಮಂಜುನಾಥ್ ಶೆಟ್ಟಿ, ಸಹ ಶಿಕ್ಷಕವೃಂದದವರು, ಅಡುಗೆ ಸಹಾಯಕರು ಸಿಬ್ಬಂದಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸದಸ್ಯರು, ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.










