ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇದರ ಡಾ. ಹೆಚ್ ಶಾಂತರಾಮ್ ಕಂಪ್ಯೂಟರ್ ಸೈನ್ಸ್ ಬ್ಲಾಕ್ ನಲ್ಲಿ ಹೊಸದಾಗಿ ನಿರ್ಮಿಸಲಾದ ಡೇಟಾ ಸೈನ್ಸ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಪ್ರಯೋಗಲಾಯವನ್ನು ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತರಾಮ್ ಪ್ರಭುಗಳು ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ. ಎಮ್. ಗೊಂಡ, ಗಣಕಯಂತ್ರ ವಿಭಾಗ ಮುಖ್ಯಸ್ಥರಾದ ಗಣೇಶ್ ಕೆ., ವಿಭಾಗದ ಎಲ್ಲಾ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.










