ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಉದ್ಯಮಿ ರಾಜೇಂದ್ರ ಕೋಡಿ ಅವರು ಪುಸ್ತಕ ಹಾಗೂ ಸಮವಸ್ತ್ರವನ್ನು ಬೈಂದೂರಿನ ಸುಬ್ರಹ್ಮಣ್ಯ ಬಿಜೂರು ಅವರ ಮುಖಾಂತರ ಈ ಕೊಡುಗೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದ್ದಾರೆ.

ತದನಂತರ ಮಾತನಾಡಿ, ವಿದ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಮುಖ್ಯ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮುಂದೆ ಬರಬೇಕು ಹಾಗೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಕಲ ಸೌಲಭ್ಯಗಳನ್ನು ನೀಡುವುದರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿಯಲು ಉತ್ತೇಜಿಸಬೇಕು ಎನ್ನುವ ನಿಟ್ಟಿನಲ್ಲಿ ಶಾಲೆಗಳಿಗೆ ಈ ರೀತಿಯ ಕೊಡುಗೆಗಳನ್ನು ನೀಡುತ್ತ ಬಂದಿದ್ದಾರೆ ಎಂದರು.
ಉದ್ಯಮಿ ರಾಜೇಂದ್ರ ಕೋಡಿ ಅವರು ಬೆಂಗಳೂರಿನಲ್ಲಿದ್ದುಕೊಂಡು ಸಮಾಜಕ್ಕೆ ಹಾಗೂ ತನ್ನ ಊರಿಗೆ ಏನಾದರೂ ಕೊಡುಗೆಯನ್ನು ಕೊಡಬೇಕು ಎನ್ನುವ ಉದ್ದೇಶದಿಂದ ಹಲವಾರು ಈ ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಕೊಂಡಿದ್ದಾರೆ.
ಶಾಲೆಯ ಹಳೆ ವಿದ್ಯಾರ್ಥಿ ಅಕ್ಷಯ್ ತಗ್ಗರ್ಸೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಮುಖ್ಯ ಶಿಕ್ಷಕಿ ಮಾಲತಿ ಹಾಗೂ ರಾಘವೇಂದ್ರ ಉಪಸ್ಥಿತರಿದ್ದರು .ಶಿಕ್ಷಕಿ ಸಾರಿಕ ಕಾರ್ಯಕ್ರಮ ನಿರೂಪಿಸಿದರು.









