Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಬ್ಬದ ರೀತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಬ್ಬದ ರೀತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: 
    ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು.

    ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಯಲಿದೆ ಎಂದ ಅವರು, ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಮತ್ತಿತರ ತಂಡಗಳಿಂದ ಆಕರ್ಷಕ ಕವಾಯತು ನಡೆಯಲಿದ್ದು, ತರಬೇತಿಗೆ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.

    ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಹ ವಿತರಿಸಲಾಗುವುದು ಎಂದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ವೇದಿಕೆ, ಆಸನದ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಪೂರೈಕೆ, ಶೌಚಾಲಯ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು, ಕ್ರೀಡಾಂಗಣದಲ್ಲಿ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳುವಂತೆ ಸೂಚನೆ ನೀಡಿದರು.

    ಕಳೆದ ಸಾಲಿನಲ್ಲಿ ರಾಷ್ಟçಮಟ್ಟದಲ್ಲಿ ಸಾಧನೆಗೈದವರು, ಅಂಗಾಂಗ ದಾನಿಗಳು ಸೇರಿದಂತೆ ಮತ್ತಿತರ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಸಹ ಗುರುತಿಸಿ, ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಗೌರವಿಸಲಾಗುವುದು ಎಂದರು.

    ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ, ಉಪಸಮಿತಿಗಳು ತಮಗೆ ವಹಿಸಿರುವ  ಕಾರ್ಯಗಳು ಸಮರ್ಪಕವಾಗಿ ಹಾಗೂ ಅಚ್ಚುಕಟ್ಟಾಗಿ ಮಾಡುವಂತೆ ಸೂಚನೆ ನೀಡಿದರು.

    ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    twenty − 8 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.