ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ಮೂರನೇ ಸೆಮಿಸ್ಟರ್‌ಗೆ ಪ್ರವೇಶಾತಿ ಪಡೆಯಲು ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ ಹಾಗೂ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 11 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.










