Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಏಕನಿವೇಶನ ನಕ್ಷೆ ಅನುಮೋದನೆಗೆ ಸರ್ಕಾರ ಹೊರಡಿಸಿರುವ ಸೊತ್ತೋಲೆಯನ್ವಯ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಏಕನಿವೇಶನ ನಕ್ಷೆ ಅನುಮೋದನೆಗೆ ಸರ್ಕಾರ ಹೊರಡಿಸಿರುವ ಸೊತ್ತೋಲೆಯನ್ವಯ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ

    Updated:06/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸರ್ಕಾರ ಏಕ ನಿವೇಶನ ನಕ್ಷೆ ಅನುಮೋದನೆ ನೀಡಲು ಈಗಾಗಲೇ ಕೆಲವೊಂದು ವಿನಾಯಿತಿಗಳನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ಸುತ್ತೋಲೆಯನ್ನು ಹೊರಡಿಸಿದೆ. ನಿಯಮಾನುಸಾರ ಇದರ ಅನುಷ್ಠಾನವನ್ನು ಮಾಡಬೇಕೆಂದು ಗ್ರಾಮಾಂತರ ಯೋಜನೆ ಇಲಾಖೆಯ ಅಭಿಯಂತರರುಗಳಿಗೆ ಜಿಲ್ಲಾಧಿಕಾರಿ ಸ್ವರೂಪಟ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರ್ಕಾರ ಕರಾವಳಿ ಪ್ರದೇಶಗಳ ಭೌಗೋಳಿಕ ಲಕ್ಷಣಗಳಿಂದಾಗಿ ಹಲವು ಸಂದರ್ಭಗಳಲ್ಲಿ ರಸ್ತೆಗಳ ಅಗಲವನ್ನು ವಿಸ್ತರಿಸಲು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ವಿನ್ಯಾಸ ಅನುಮೋದನೆ ಸಮಯದಲ್ಲಿ ವಿನಾಯಿತಿ ನೀಡಲು ಅವಕಾಶ ನೀಡಿ ಸರಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರನ್ವಯ ನಿಯಮಾನುಸಾರ ಅನುಮೋದನೆಯನ್ನು ನೀಡಬೇಕು ಎಂದರು.

    ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ಅನ್ನು ಪಡೆಯಲು ಜನಸಾಮಾನ್ಯರು ಸಂಬAಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಿದರೂ ಅವುಗಳನ್ನು ಪಡೆಯಲು ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು ಎಂದರು.

    ಶಾಸಕ ಸುನೀಲ್ ಕುಮಾರ್ ಮಾತನಾಡಿ, ಸರಕಾರ ಆಡಳಿತಾತ್ಮಕ ದೃಷ್ಠಿ ಸೇರಿದಂತೆ ಜಿಲ್ಲೆಯ ಸ್ಥಳೀಯ ಭೌಗೋಳಿಕ ಪ್ರದೇಶವನ್ನು ಪರಿಗಣಿಸಿ, ಕೆಲವೊಂದು ವಿನಾಯಿತಿಗಳನ್ನು ನೀಡುತ್ತದೆ. ಅದೇ ರೀತಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಡಿಕೇರಿ ಜಿಲ್ಲೆಗಳಿಗೆ ಏಕ ನಿಕ್ಷೆ ವಿನ್ಯಾಸ ಅನುಮೋದನೆ ನೀಡಲು ಹಲವು ವಿನಾಯಿತಿಗಳನ್ನು ನೀಡಿ, ಈ ಹಿಂದೆ ಸುತ್ತೋಲೆಯನ್ನು ಹೊರಡಿಸಿದೆ. ಅದರನ್ವಯ ಏಕವಿನ್ಯಾಸ ಅನುಮೋದನೆಯನ್ನು ನೀಡಿದರೆ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ. ಅಧಿಕಾರಿಗಳು ಇವುಗಳನ್ನು ಇಚ್ಛಾಶಕ್ತಿಯಿಂದ ಮಾಡುವುದರೊಂದಿಗೆ ಜನರಿಗೆ ನೆರವಾಗಬೇಕು. ಸರಕಾರದ ಸುತ್ತೋಲೆಗಳನ್ನು ತಮ್ಮ ಇಚ್ಛೆಗೆ ಅನುಸಾರವಾಗಿ ಅರ್ಥೈಸಿಕೊಳ್ಳುವುದು ತಪ್ಪು ಎಂದರು.

    Click here

    Click here

    Click here

    Click Here

    Call us

    Call us

    ಸಾರ್ವಜನಿಕರು ಆಸ್ತಿ ಖರೀದಿ ಮಾಡಿ, ಕ್ರಯಪತ್ರವಾಗುವ ಸಂದರ್ಭದಲ್ಲಿ ಭೂಮಿಯ ಪೂರ್ತಿ ಭಾಗಕ್ಕೆ ಶುಲ್ಕವನ್ನು ಕಟ್ಟಿಸಿಕೊಳ್ಳುತ್ತಾರೆ. ಆದರೆ ಅದರಲ್ಲಿ ರಸ್ತೆಯ ಜಾಗವೂ ಒಳಗೊಂಡಿರುತ್ತದೆ.ಇದು ಸರಿಯಲ್ಲ ಎಂದರು.

    ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ತಮ್ಮ ವಾಸಕ್ಕೆ ಸ್ವಂತ ಕಟ್ಟಡಗಳನ್ನು ಕಟ್ಟಿಕೊಳ್ಳುವ ಉದ್ದೇಶದಿಂದ ಏಕನಕ್ಷೆ ವಿನ್ಯಾಸ ಅನುಮೋದನೆ ಪಡೆಯಲು ನಗರ ಯೋಜನಾ ಪ್ರಾಧಿಕಾರದಲ್ಲಿ ಆಗುವುದಿಲ್ಲ ಎಂದು ಜನರ ಮನಸ್ಸಿನಲ್ಲಿ ಇದೆ. ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಕಂಡು ಬರುವ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ಕಂಡುಕೊಂಡು ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸರಕಾರದಿಂದ ಬಡಜನರಿಗೆ 94 ಸಿ ಸೇರಿದಂತೆ ಮತ್ತಿತರ ಮಂಜೂರಾತಿಯಲ್ಲಿ ನೀಡಿದ ನಿವೇಶನಗಳಿಗೂ ಏಕನಕ್ಷೆ ನಿವೇಶನ ವಿನ್ಯಾಸ ಅನುಮೋದನೆ ಪಡೆಯಲು ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈಗಾಗಲೇ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದಕ್ಕೆಲ್ಲಾ ವಿನಾಯಿತಿಗೊಳಿಸಬಹುದೆಂಬುದನ್ನು ನಿಖರವಾಗಿ ಸೂಚಿಸಲಾಗಿದೆ. ಅದರನ್ವಯ ಅನುಮೋದನೆ ನೀಡುವುದು ಒಳಿತು ಎಂದರು.

    ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರ ಮತ್ತು ಗ್ರಾಮಾಂತರ ಇಲಾಖೆಯ ಸಹಾಯಕ ನಿರ್ದೇಶಕಿ ರಮ್ಯಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    20 − sixteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.