ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಹೊಸಬಡಾಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಸುಮಾರು 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಜು. 30ರಂದು ನಿವೃತ್ತರಾದ ಸಹಶಿಕ್ಷಕ ಅನಂತಯ್ಯ ನಾವಡ ಇವರಿಗೆ ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ ಮೊಗವೀರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಹರಿಕೃಷ್ಣ ಹಂದೆ, ವಿದ್ಯಾಭಿಮಾನಿಗಳಾದ ಪ್ರಕಾಶ್ ಬೆಟ್ಟಿನ್, ಶ್ರೀನಿವಾಸ ಗಾಣಿಗ, ಕೋಟೇಶ್ವರ ಪಂಚಾಯತ್ ಸದಸ್ಯರಾದ ರಾಜು ಮೊಗವೀರ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಆನಂದ್ ಕುಂದರ್ ಉಪಸ್ಥಿತರಿದ್ದರು.
ಕ್ಷೇತ್ರದ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಪ್ರಾಸ್ತಾವಿಕ ಮಾತನಾಡಿದರು. ಸಹಶಿಕ್ಷಕರಾದ ಅಶೋಕ್ ಕುಮಾರ್ ಅವರು ಅನಂತಯ್ಯ ನಾವಡರನ್ನು ಪರಿಚಯಿಸಿದರು. ದೈ.ಶಿ.ಶಿ. ಮಂಜು ಮತ್ತು ವಿದ್ಯಾರ್ಥಿಗಳ ಪರವಾಗಿ ಪ್ರಥಮ್ ಅನಿಸಿಕೆಗಳನ್ನು ಹಂಚಿಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಪದ್ಮಾವತಿ ಅವರು ಸ್ವಾಗತಿಸಿ, ಸಹಶಿಕ್ಷಕಿ ಶೈಲಾ ನಿರೂಪಿಸಿ, ಶಿಕ್ಷಕಿ ಮಂಗಳಾ ವಂದಿಸಿದರು.










