Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ

    Updated:06/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
     ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ ಕ್ರಿಯೇಟಿವ್ ಕೆಸರ್ಡೊಂಜಿ ದಿನ ‘ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು ಮಂಗಳವಾರ ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಬೆಂಗಳೂರು ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟನಾ ಭಾಷಣದಲ್ಲಿ ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು . “ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ”ಎಂದು ತಿಳಿಸಿದರು.

    ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ. ಅವರು ಪ್ರಾಸ್ತಾವಿಕ ನುಡಿಗಳನ್ನಡುತ್ತಾ, ನಮ್ಮ ಸಂಸ್ಥೆಯ ವಿದ್ಯಾರ್ಥಿ ಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸುತ್ತಾ, ಆಗಮಿಸಿದ ಸರ್ವರನ್ನು ಸ್ವಾಗತಿಸಿದರು . ಸ್ಥಳ ದಾನಿ ಯೋಗೀಶ್ ಕಿಣಿ, ಶಿಕ್ಷಕರು, ಸ.ಕಿ.ಪ್ರಾ ಶಾಲೆ ಪಲಾಯಿ ಬಾಕ್ಯಾರು, ತೆಳ್ಳಾರು ಅವರು ಸಭೆಯನ್ನು ಉದ್ದೇಶಿಸಿ “ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳಿಗೆ ಕ್ರೀಡೆ, ಮಣ್ಣು, ಪ್ರಕೃತಿಯ ಸಂಪರ್ಕ ಕಡಿಮೆ ಆಗುತ್ತಿದೆ. ಇಂತಹ ಕೆಸರ್ಡೊಂಜಿ ದಿನ ಕಾರ್ಯಕ್ರಮಗಳು ಮಕ್ಕಳಿಗೆ ನೈಜ ಅನುಭವಗಳನ್ನು ನೀಡುವ ಮೂಲಕ ಪ್ರಕೃತಿಯೊಂದಿಗೆ ಅವರ ಸಂಬಂಧವನ್ನು ಪುನರ್ ಸ್ಥಾಪಿಸುತ್ತದೆ” ಎಂದು ತಿಳಿಸಿದರು.

    ಸಹ ಸಂಸ್ಥಾಪಕರಾದ ಆದರ್ಶ ಎಂ.ಕೆ. ಹಾಗೂ ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಉದ್ಯಮಿಗಳಾದ ಸರ್ವೋತ್ತಮ ಕಡಂಬ ಅವರು ಈ ಕಾರ್ಯಕ್ರಮದ ತಾತ್ಪರ್ಯವನ್ನು ಹಂಚಿಕೊಂಡರು.

    ಈ ಸಂದರ್ಭದಲ್ಲಿ ಹಿರ್ಗಾನ ಗ್ರಾಮದ ಪ್ರಗತಿಪರ ಕೃಷಿಕರಾದ ಸತ್ಯನಾರಾಯಣ ಪಡ್ರೆ, ಸದಾನಂದ ಶೆಟ್ಟಿಗಾರ್, ವಿಠಲ್ ನಾಯಕ್ ಅವರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

    Click here

    Click here

    Click here

    Call us

    Call us

    ಸಮಾರಂಭಕ್ಕೆ ಆಗಮಿಸಿದ ಎಲ್ಲರಿಗೂ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಖಾದ್ಯಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

    ಸಮಾರೋಪ:
    ಅಪರಾಹ್ನ ಸಮಯ ಸಂಜೆ 4:00 ಗಂಟೆಗೆ ಸಮಾರೋಪ ಕಾರ್ಯಕ್ರಮ ಜರುಗಿತು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ಅವರು ಆಗಮಿಸಿದ ಸರ್ವರನ್ನು ಸ್ವಾಗತಿಸುತ್ತ ಕಾರ್ಯಕ್ರಮ ಯಶಸ್ವಿಗೆ ಕಾರಣರಾದ ಎಲ್ಲರನ್ನು ಸ್ಮರಿಸಿದರು.

    ಅಧ್ಯಕ್ಷೀಯ ನುಡಿಗಳನ್ನಾಡಿದ ಸಂಸ್ಥಾಪಕರಲ್ಲಿ ಓರ್ವರಾದ ವಿಮಲ್ ರಾಜ್. ಜಿ. ರವರು “ಗ್ರಾಮೀಣ ಜೀವನ ಶೈಲಿಯು ಪಾಠ ಪುಸ್ತಕದ ಹೊರಗಿನ ಶಿಕ್ಷಣವನ್ನು ನೀಡುತ್ತದೆ. ಆಧುನಿಕ ದಿನಚರಿಯಲ್ಲಿ ಮಕ್ಕಳಿಗೆ ಶಾರೀರಿಕ ಚಟುವಟಿಕೆ ಕಡಿಮೆಯಾಗಿದೆ. ಆದರೆ ಈ ಕೆಸರಿನ ಆಟಗಳು ಕೇವಲ ಮನರಂಜನೆ ಮಾತ್ರವಲ್ಲ, ಶಕ್ತಿಯ ಪೂರಕವೂ ಹೌದು” ಎಂದು ನುಡಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ, “ನಮ್ಮ ಬಾಳಿನಲ್ಲಿ ಮಣ್ಣು ಎಂಬುದು ಅತ್ಯಂತ ಪ್ರಾಥಮಿಕ ಅಂಶ. ಮಣ್ಣಿನ ಜೊತೆ ನಮ್ಮ ಸಂಬಂಧ ಗಟ್ಟಿಯಾಗಿರಬೇಕೆಂದರೆ ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯ “ಎಂದರು.

    ಇನ್ನೋರ್ವ ಅತಿಥಿ ಎಆರ್‌ ಸುನಿಲ್ ಕುಮಾರ್. ಜಿ. ಮಾತನಾಡಿ, “ಕಲಿಕೆ ಎಂದರೆ ಪಾಠ ಮಾತ್ರವಲ್ಲ. ಅನುಭವವೂ ಕೂಡ. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಶಿಸ್ತು, ಸಹಕಾರ ಮತ್ತು ಆತ್ಮವಿಶ್ವಾಸವನ್ನು ಕಲಿಯುತ್ತಾರೆ ಎಂದು ಅತಿಥಿ ನುಡಿಗಳನ್ನಾಡಿದರು.

    ಸಂಸ್ಥಾಪಕರಲ್ಲಿ ಓರ್ವರಾದ ವಿದ್ವಾನ್ ಗಣಪತಿ ಭಟ್, ಹಿರಿಯರೂ, ಉದ್ಯಮಿಗಳೂ ಆಗಿರುವ ಜಗದೀಶ್ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.  ಎಲ್ಲಾ ಅತಿಥಿವರೇಣ್ಯರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. 

    ಅತಿಥಿಗಳಾದ ಚೇತನ್, ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ., ಆದರ್ಶ ಎಂ.ಕೆ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳು ಬೋಧಕ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕರಾದ ಲೋಹಿತ್ ಎಸ್.ಕೆ ಹಾಗೂ ಪ್ರಿಯಾಂಕ ತೀರ್ಥರಾಮ ಅವರು ಕಾರ್ಯಕ್ರಮ ನಿರ್ವಹಿಸಿಕೊಟ್ಟರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.