ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ವತಿಯಿಂದ ಶನಿವಾರ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ ಸ್ಪೆಕ್ಟರ್ ಹಾಗೂ ಸಿಬ್ಬಂದಿಯವರಿಗೆ ಮತ್ತು ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಕಚೇರಿಗೆ ಭೇಟಿ ನೀಡಿ, ಅವರಿಗೆ ರಕ್ಷೆಯನ್ನ ಕಟ್ಟಿ ರಕ್ಷಾ ಬಂಧನವನ್ನು ಆಚರಿಸಿಲಾಯಿತು.



ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಧ್ಯಾ ಸಾಲಿಯಾನ್, ಶ್ವೇತಾ ಶ್ರೀನಿಧಿ ಉಪಾಧ್ಯಾಯ, ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ. ಎಸ್. ಜಿಲ್ಲಾ ಬಿಜೆಪಿ ಪ್ರಭಾರಿ ರಾಜೇಶ್ ಕಾವೇರಿ, ಒಬಿಸಿ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಎಸ್.ಸಿ. ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು, ಪಕ್ಷದ ಪ್ರಮುಖರಾದ ದಿವಾಕರ್ ಕಡ್ಗಿ, ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.










