ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಂಡ್ಲೂರು ಝಿಯಾ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಗಗನ್ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೂ ಅದೇ ಪಂದ್ಯಾಟದ 25 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಪ್ರೀತೇಶ್ 8ನೇ ತರಗತಿ ವಿದ್ಯಾರ್ಥಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದ 30 ಕೆ.ಜಿ ವಿಭಾಗದ ಕರಾಟೆ ಪಂದ್ಯದಲ್ಲಿ ಸುಧನ್ವ 8 ನೇ ತರಗತಿ ವಿದ್ಯಾರ್ಥಿ ತೃತೀಯ ಸ್ಥಾನಗಳಿಸಿರುತ್ತಾರೆ.
ಅವರಿಗೆ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್, ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










