ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜನಾ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾದ ಹರ್ ಘರ್ ತಿರಂಗಾ ಕಾರ್ಯಕ್ರಮದ ಆ.13ರಿಂದ 15ರವೆರೆಗೆ ಪ್ರತಿ ಮನೆಯಲ್ಲೂ ತಿರಂಗಾ ಹಾರಾಡಬೇಕು. ಆ.15ರಂದು ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಮನೆ ಮನೆಯಲ್ಲೂ ಹಾಕಿಕೊಳ್ಳಬೇಕು. ನಮ್ಮ ವಾರ್ಡ್, ನಮ್ಮ ಬೂತ್ ಮತ್ತು ನಮ್ಮ ಮನೆಯ ಸುತ್ತಮುತ್ತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವುದರ ಮೂಲಕ ಈ ದೇಶಭಕ್ತಿ ಕಾರ್ಯಕ್ರಮವನ್ನು ಇನ್ನೂ ಚೆನ್ನಾಗಿ ನಡೆಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಅವರು ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೈಂದೂರು ಮಂಡಲ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ತಿರಂಗಾ ಯಾತ್ರೆಯ ಬೃಹತ್ ಬೈಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ರಾಷ್ಟ್ರೀಯ ಕಾರ್ಯಕ್ರಮ, ರಾಷ್ಟ್ರೀಯ ವಿಚಾರಧಾರೆಯುಳ್ಳ ಬಿಜೆಪಿ ಕಾರ್ಯಕರ್ತರು ರಾಷ್ಟ್ರ ಮುಖ್ಯ ಎನ್ನುವ ಎಲ್ಲಾ ಕಾರ್ಯಕ್ರಮಗಳನ್ನು ಪ್ರೀತಿಯಿಂದ ಮತ್ತು ಜಾಗೃತೆಯಿಂದ ಎಲ್ಲರೂ ಸೇರಿ ಆಚರಿಸುವಂತಹ ಈ ಸಂದರ್ಭವನ್ನು ನೋಡಲು ಹೆಮ್ಮೆ. ಬಿಜೆಪಿ ಕಾರ್ಯಕರ್ತರು ಕಾನೂನನ್ನೂ ಗೌರವಿಸುತ್ತೇವೆ, ಸಂವಿಧಾನವನ್ನೂ ಗೌರವಿಸುತ್ತೇವೆ ಎಂದು ಹೇಳುದನ್ನು ಆಚರಿಸುತ್ತಾ ಬರಬೇಕು ಎಂದು ಅವರು ಹೇಳಿದರು.
ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ಮತ್ತು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿದರು. ನಿವೃತ್ತ ಭೂಸೇನಾ ಯೋಧ ಗಣಪತಿ ಖಾರ್ವಿ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬಿಜೆಪಿ ಬೈಂದೂರು ಮಂಡಲ ಪ್ರ.ಕಾರ್ಯದರ್ಶಿ ಕರಣ್ ಪೂಜಾರಿ, ಮಂಡಲ ಉಪಾಧ್ಯಕ್ಷ ಮಿಥುನ್ ಎಂ.ಡಿ. ಬಿಜೂರು, ಬೈಂದೂರು ಮಂಡಲ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಶಿವರಾಜ್ ಪೂಜಾರಿ, ಎಸ್ಸಿ ಮೋರ್ಚಾ ಅಧ್ಯಕ್ಷ ಅಶೋಕ ಎನ್.ಡಿ., ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಂತೋನಿ ಡಿಸೋಜ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವೀಂದ್ರ ಖಾರ್ವಿ ಹೊಸಪೇಟೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಘವೇಂದ್ರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೂ ಮುನ್ನ ಮುಳ್ಳಿಕಟ್ಟೆಯಿಂದ ಮರವಂತೆ ಮಾರ್ಗವಾಗಿ ತ್ರಾಸಿವರೆಗೆ ಬೃಹತ್ ಬೈಕ್ ರ‍್ಯಾಲಿ ನಡೆಯಿತು. ನೂರಾರು ಬಿಜೆಪಿ ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.















