ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ನೆರವೇರಿತು.
ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಕಾರ್ಯದರ್ಶಿಯಾದ ಕೆ. ರಾಧಾಕೃಷ್ಣ ಶೆಣೈ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಕ್ರೀಡೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.
ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ, ಕುಂದಾಪುರ ವಲಯ ದೈಹಿಕ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ, ಉಡುಪಿ ಜಿಲ್ಲಾ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಸುಮಾಕರ ಶೆಟ್ಟಿ, ಉಡುಪಿ ಜಿಲ್ಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿಶನ್ ರಾಜ್ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿಜಯಕುಮಾರ ಶೆಟ್ಟಿ, ಗ್ರೇಡ್ -1 ದೈಹಿಕ ಶಿಕ್ಷಕರ ಸಂಘ ಕುಂದಾಪುರ ವಲಯದ ಅಧ್ಯಕ್ಷರಾದ ಉದಯ ಮಡಿವಾಳ, ಸ್ಥಳಿಯ ಸಂಪನ್ಮೂಲ ವ್ಯಕ್ತಿ ಸಂತೋಷ್ ಕುಮಾರ್ ಶೆಟ್ಟಿ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ಹಾಗೂ ಸಂಸ್ಥೆಯ ಹಿರಿಯ ದೈಹಿಕ ಶಿಕ್ಷಕರಾದ ಸುಬ್ರಮಣ್ಯ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಮುಖ್ಯೋಪಧ್ಯಾಯರಾದ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿ, ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ನಾಗೇಂದ್ರ ವಂದಿಸಿದರು.















