ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜು, ರೆಡ್ ಕ್ರಾಸ್ ಘಟಕದ ವತಿಯಿಂದ ಜಿನೇವಾ ಒಪ್ಪಂದ ದಿನದ ಪ್ರಯುಕ್ತ ರೆಡ್ ಕ್ರಾಸ್‌ನ ಸೇವಾ ಕಾರ್ಯಗಳಿಗೆ ನಿಧಿ ಸಂಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕದ ಅಧಿಕಾರಿ ಮುರಳೀಧರ ಹೆಗ್ಡೆ, ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಕ್ರೀಯವಾಗಿ ನಿಧಿ ಸಂಗ್ರಹಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.










