ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ಎ ಸ್ಪರ್ಧೆಗಳ ಅಂಗವಾಗಿ ಬೆಂಗಳೂರಿನ ಪೋಲೀಸ್ ಸ್ಪಿರಿಟ್ ಶಾಲೆಯಲ್ಲಿ ಪ್ರಾದೇಶಿಕ ಮಟ್ಟದ ಖೋ ಖೋ ಸ್ಪರ್ಧೆಗಳನ್ನು ನಡೆಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ವಿದ್ಯಾರ್ಥಿಗಳಾದ ಸಚೇತ್, ಖುಷಿ ಬಿ. ಟಿ, ಅನುಷ್ಕಾ ಹುರಳಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಹುರಿದುಂಬಿಸಿದರು.










