ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತು ವಿರೋಧಿ ಸಮಿತಿಯ ಆಶ್ರಯದಲ್ಲಿ ಸಾಮೂಹಿಕ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಾವತಿ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು ನಮ್ಮ ಜಿಲ್ಲೆ, ರಾಜ್ಯ ಹಾಗೂ ದೇಶ ನಶಾ ಮುಕ್ತ ಆಗುವಲ್ಲಿ ಯುವ ಜನತೆ ಪಣ ತೊಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಮಾದಕ ದ್ರವ್ಯ ವಿರೋಧಿ ಸಮಿತಿಯ ಸಂಚಾಲಕರು ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಪ್ರತಿಜ್ಞಾ ವಿಧಿ ಬೋಧಿಸಿದರು.










