Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ಪೂರ್ಣಗೊಳಿಸಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ಪೂರ್ಣಗೊಳಿಸಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 169 ಎ ಗೆ ಸಂಬಂಧಿಸಿದಂತೆ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಹೊಂಡ-ಗುಂಡಿಗಳಿಂದ ಕೂಡಿದ್ದು, ಇವುಗಳ ದುರಸ್ಥಿಗೆ ಹಾಗೂ ನಿರ್ವಹಣೆಗೆ ಮುಂದಾಗಬೇಕು ಎಂದರು.

    ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಪರಿಹಾರದ ಹಣವನ್ನು ಕಾಲಮಿತಿಯಲ್ಲಿ ನೀಡಬೇಕು ಎಂದ ಅವರು, ಸೆಪ್ಟಂಬರ್ ಮೊದಲ ವಾರದಿಂದ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

    ಕರಾವಳಿ ಜಂಕ್ಷನ್‌ನಲ್ಲಿ ಫ್ರೀ ಏರಿಯಾ ಅಳವಡಿಸುವುದರ ಮೂಲಕ ಲಘು ವಾಹನಗಳಿಗೆ ಸಂಚರಿಸಲು ಅನುಕೂಲವಾಗುವಂತೆ ಕಾಮಗಾರಿ ಮುಗಿಸಬೇಕು. ಶಾಶ್ವತ ಕಾಮಗಾರಿಗಳನ್ನು ಆರಂಭಿಸುವ ಮುನ್ನ ತಾತ್ಕಾಲಿಕ ರಸ್ತೆಗಳಲ್ಲಿರುವ ಹೊಂಡ-ಗುಂಡಿಗಳನ್ನು ತುರ್ತಾಗಿ ಮುಚ್ಚಿಸುವ ಕೆಲಸವಾಗಬೇಕು. ಈಗಾಗಲೇ ದಾಖಲೆಗಳನ್ನು ನೀಡದಿರುವ 18 ಜನರಿಗೆ ನ್ಯಾಯಾಲಯದ ಮೂಲಕ ಪರಿಹಾರ ಠೇವಣಿ ಇರಿಸಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಣ್ಣ ಪುಟ್ಟ ಕಾರಣಗಳಿಂದ ಬಾಕಿ ಉಳಿದಿರುವ 90 ಭೂಸ್ವಾಧೀನ ಪ್ರಕರಣಗಳಿಗೆ 2 ದಿನಗಳ ಒಳಗಾಗಿ 3ಡಿ ಸಮರ್ಪಕಗೊಳಿಸಿ, ಬೆಂಗಳೂರು ಆರ್.ಓ ಕಚೇರಿಗೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

    Click here

    Click here

    Click here

    Click Here

    Call us

    Call us

    ಹೆಬ್ರಿ-ಚಾರದವರೆಗೆ ಮತ್ತು ಆಗುಂಬೆ ಘಾಟ್‌ನ ಹೆದ್ದಾರಿಯ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧವಾಗಿದೆ. ಈ ಎರಡೂ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಫೂರ್ಣಗೊಳಿಸಿ,  ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಸೂಚನೆ ನೀಡದರು.

    ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯ ಕಾಂಕ್ರೀಟಿಕರಣ ಮುಕ್ತಾಯಗೊಂಡಿದ್ದು, ಎರಡೂ ಬದಿಯ ಇವಿಟ್‌ಮೆಂಟ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಸೆಪ್ಟಂಬರ್ 15 ಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

     ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಾಹನಗಳ ಬದಲಿ ಮಾರ್ಗ ವ್ಯವಸ್ಥೆಗೆ ಈಗಾಗಲೇ ಆದೇಶ ಮಾಡಲಾಗಿದೆ. ಅಲ್ಲಿನ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಇತರೆ ಭಾಗಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಸಾರ್ವಜನಿಕ ವಾಹನಗಳ ಚಾಲನೆಗೆ ಅಗತ್ಯವಿರುವ ಬದಲಿ ತಾತ್ಕಾಲಿಕ ರಸ್ತೆಗಳನ್ನು ಸಹ ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಸೂಚಿಸಿದರು.

    ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳಿಗೆ ಸಂಚರಿಸಲು ಒಂದು ಬದಿಯಲ್ಲಿ ಅವಕಾಶ ಕಲ್ಪಿಸಿ, ಭಾರೀ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡುವುದರೊಂದಿಗೆ ಕಾಮಗಾರಿ ಆರಂಭಿಸುವಂತೆ ಸಲಹೆ ನೀಡಿದರು.

    ಸಭೆಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಡಿ.ಎಫ್.ಓ ಗಣಪತಿ, ಎಎಸ್‌ಪಿ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ಎನ್.ಹೆಚ್ ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    two × five =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.