Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೆಸಾ ಪ.ಪೂ ಕಾಲೇಜಿನಲ್ಲಿ ಹೆತ್ತವರ – ಶಿಕ್ಷಕರ ಸಭೆ
    ಊರ್ಮನೆ ಸಮಾಚಾರ

    ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೆಸಾ ಪ.ಪೂ ಕಾಲೇಜಿನಲ್ಲಿ ಹೆತ್ತವರ – ಶಿಕ್ಷಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ,
    ಶಂಕರನಾರಾಯಣ:
    ಇಲ್ಲಿನ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಕಿರಿಯ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿ ಪೂರ್ವ ವಿಭಾಗಗಳವರೆಗೆ ವಿದ್ಯಾರ್ಥಿಗಳ ಹೆತ್ತವರ ಸಭೆಯು ಇತ್ತೀಚಿಗೆ ನಡೆಯಿತು.    

    Click Here

    Call us

    Click Here

    ಆಡಳಿತ ನಿರ್ದೇಶಕರು ಪೋಷಕರೊಂದಿಗೆ ಸೇರಿ  ಸಭೆಯನ್ನು ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹಾಯಕ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ‘ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ‘ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು.

    ಆಡಳಿತ ನಿರ್ದೇಶಕರಾದ ರೆನಿಟೋ ಲೋಬೊ ಅವರು ಮಾತನಾಡಿ ” ಮೊಬೈಲ್ ನಿಂದ ಆಗುವ ದುಷ್ಪರಿಣಾಮಗಳ  ಬಗ್ಗೆ ತಿಳಿಸಿದರು ಹಾಗೂ ಮಕ್ಕಳಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡುವುದು ಪೋಷಕರ ಆದ್ಯ ಕರ್ತವ್ಯ ಎನ್ನುವುದನ್ನು ಮನಮುಟ್ಟುವಂತೆ ತಿಳಿಸಿದರು.

    ನಂತರ  ಇನ್ನೋರ್ವ ಆಡಳಿತ ನಿರ್ದೇಶಕರಾದ  ಶಮಿತಾ ರಾವ್ ಅವರು  ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕನಸಿಗೆ ಪ್ರೋತ್ಸಾಹದ ನೀರೆರೆಯುವುದು ಪೋಷಕರ ಕರ್ತವ್ಯ ಎನ್ನುವುದನ್ನು ಸೂಚ್ಯವಾಗಿ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಪ್ರೌಢಶಾಲಾ ವಿಭಾಗದ ಹೆತ್ತವರ ಸಭೆಯಲ್ಲಿ  ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಜೇಸನ್ ಲೂಯಿಸ್   ಹಾಗೂ  ಉಪಪ್ರಾಂಶುಪಾಲರಾದ ಗೀತಾ ಪದವಿ ಪೂರ್ವ ವಿಭಾಗದ ಹೊಸ ಕಾರ್ಯ ಯೋಜನೆಗಳ ಬಗ್ಗೆ  ಮಾಹಿತಿ ನೀಡಿದರು.

    ಪ್ರೌಢಶಾಲಾ ವಿಭಾಗದಲ್ಲಿ ಸಂಯೋಜಕರಾದ ಸುಧೀರ ಪೂಜಾರಿ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ  ಅಕ್ಷತಾ ಅವರು ಸರ್ವರನ್ನು ಸ್ವಾಗತಿಸಿ, ಶಿಕ್ಷಕರ ಕಿರು ಪರಿಚಯವನ್ನು ನೀಡಿದರು.

    ತರುವಾಯ ಪೋಷಕರು ಶಿಕ್ಷಕರು ಮತ್ತು ಶಾಲೆಯ ಆಡಳಿತ ಮಂಡಳಿಯೊಂದಿಗೆ ನೇರವಾಗಿ ಚರ್ಚೆ ನಡೆಸಿ ತಮ್ಮ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಹಾಗೂ ಶಾಲಾ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದ  ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು. ಅದೇ ರೀತಿ ಪದವಿ ಪೂರ್ವ ವಿಭಾಗದ ಸಭೆಯಲ್ಲಿ ಎಲ್ಲಾ ಪೋಷಕರು ಆಯಾ ವಿಷಯದ ಉಪನ್ಯಾಸಕರನ್ನು ಭೇಟಿಯಾಗಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಿ ಅದರಲ್ಲಾದ ಗುಣಾತ್ಮಕ ಬದಲಾವಣೆಯನ್ನು ಕಂಡು ಸಂತೃಪ್ತಿಯಿಂದ ಸಂತೋಷವನ್ನು ವ್ಯಕ್ತಪಡಿಸಿದರು.

     ತನ್ಮೂಲಕ ಸಮನ್ವಯ ಎಂಬ ಶೀರ್ಷಿಕೆಯಡಿಯಲ್ಲಿ ಆರಂಭವಾದ ಶಿಕ್ಷಕರ ಮತ್ತು ಹೆತ್ತವರ ಮುಕ್ತ  ಚರ್ಚೆಯು ಅರ್ಥಪೂರ್ಣವಾಗಿ ಮುಕ್ತಾಯಗೊಂಡಿತು. ಈ ಸಂವಾದವು ಶಾಲೆ ಮತ್ತು ಪೋಷಕರ ನಡುವೆ ಪರಸ್ಪರ ವಿಶ್ವಾಸ ಮತ್ತು ಸಹಕಾರದ ನಂಟನ್ನು ಮತ್ತಷ್ಟು ಬಲಪಡಿಸಿತು. ಮುಂದಿನ ದಿನಗಳಲ್ಲಿ ಶಾಲೆಯ ಗುಣಮಟ್ಟವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಸಭೆ ಪ್ರೇರಕವಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    two × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.