Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ
    ಎಲ್ಲಿ ಏನು

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದ್ವೀಪ ಬ್ಲಿರ್ಸ್‌ ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡುಬಂದಿದೆ. ಇದರಿಂದ ರಸ್ತೆ ಅಪಘಾತದಲ್ಲಿ ಸಾವು-ನೋವುಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ, ಶಾಶ್ವತ ಕಾಮಗಾರಿ ಕೈಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು.

    ಜಿಲ್ಲೆಯ ಸಾರ್ವಜನಿಕರು ವಾಹನದಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ವಾಹನಗಳನ್ನು ಜಾಗರೂಕತೆಯಿಂದ ಚಾಲನೆ ಮಾಡಬೇಕು. ಸಾರಿಗೆ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ಸಂಚರಿಸುವುದರೊಂದಿಗೆ ಯಾವುದೇ ಅವಘಡಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

    ಉಡುಪಿ ನಗರ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ವಿವಿಧ ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದರಿಂದ, ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವ ಹಿನ್ನೆಲೆ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ಇರುವ ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್ ನೀಡಿ, ನಿಯಮಾನುಸಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. .

    Click here

    Click here

    Click here

    Call us

    Call us

    ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ರಸ್ತೆಯ ಮಧ್ಯದಲ್ಲಿ ಜಾಹೀರಾತುಗಳನ್ನು ಅಳವಡಿಸಲು ಉಪಯೋಗಿಸಿರುವ ಕಂಬಗಳ ತೆರವು ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುವಂತಹ ಫಾಸ್ಟ್ ಫುಡ್ ಸೆಂಟರ್, ತಳ್ಳುವ ಗಾಡಿಗಳು ಹಾಗೂ ಗೂಡಂಗಡಿಗಳನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳ ಮುಂಭಾಗದಲ್ಲಿ ಬಸ್‌ಗಳ ಸ್ಟಾಪ್ ನೀಡುತ್ತಿದ್ದು, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ. ಶಾಲೆ ಹಾಗೂ ಆಸ್ಪತ್ರೆಗಳ ಬಳಿ ಬಸ್ ನಿಲ್ಲದೇ ಸೂಕ್ತ ನಿಲ್ದಾಣಗಳನ್ನು ಬಸ್‌ಗಳು ನಿಲ್ಲಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಆಟೋ ರಿಕ್ಷಾ ತಂಗುದಾಣಗಳಲ್ಲಿ ಎಲ್ಲಾ ಆಟೋ ರಿಕ್ಷಾ ಚಾಲಕರು ತಮ್ಮ ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಬೇಕೆಂದು ಮನವಿಗಳನ್ನು ನೀಡಿದ್ದು, ಈ ಸಂಬAಧ ಆರ್.ಟಿ.ಓ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಆಯುಕ್ತರು ನಿಲ್ದಾಣ ಸಾಮರ್ಥ್ಯದ ಆಧಾರ ಮೇಲೆ ಆಟೋರಿಕ್ಷಾಗಳ ನಿಲುವಿಕೆಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. 

    ಉಡುಪಿ ಅಂಬಲಪಾಡಿ ವಾರ್ಡಿನ ದೇವಸ್ಥಾನದ ಹಿಂಬದಿಯ ರಸ್ತೆಯಿಂದ ದೇವಸ್ಥಾನಕ್ಕೆ ಹೋಗುವ ರಸ್ತೆ ಕೂಡುವಲ್ಲಿ ಹಾಗೂ ಹೊಸದಾಗಿ ಡಾಂಬರೀಕರಣ ಮಾಡುವ ಸಮಯದಲ್ಲಿ ತೆರವುಗೊಳಿಸಲಾದ ಹಂಪ್ಸ್ಗಳನ್ನು ಪುನರ್ ನಿರ್ಮಿಸುವಂತೆ ಅಭಿಯಂತರರುಗಳಿಗೆ ತಿಳಿಸಿದರು.

    ಹೆಬ್ರಿ ತಾಲೂಕಿನ ಪಂಚಾಯತ್ ವ್ಯಾಪ್ತಿಯ ರಿಕ್ಷಾ ನಿಲ್ದಾಣವನ್ನು ಖಾಯಂ ನಿಲ್ದಾಣವಾಗಿ ಮಾಡುವ ಬಗ್ಗೆ ಮನವಿ ಬಂದಿದ್ದು, ಲೋಕೋಪಯೋಗಿ ಹಾಗೂ ಆರ್.ಟಿ.ಓ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅವಶ್ಯವಿದ್ದಲ್ಲಿ ಮಾತ್ರ ಖಾಯಂ ನಿಲ್ದಾಣ ಮಾಡಲು ಅನುಮತಿ ನೀಡುವಂತೆ ತಿಳಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೀಡಿಯನ್ ಓಪನ್‌ಗಳನ್ನು ಮಾಡುವಾಗ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆಯಾಗದಂತೆ, ನಿಯಮಾನುಸಾರ ವಾಹನ ದಟ್ಟಣೆ ಆಗದೇ ಇರುವಂತಹ ಸ್ಥಳಗಳನ್ನು ಗುರುತಿಸಿ, ಮಾಡಬೇಕೆಂದ ಅವರು, ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮವಹಿಸಬೇಕು ಎಂದರು.

    ಸಭೆಯಲ್ಲಿ ಡಿ.ಎಫ್.ಓ ಗಣಪತಿ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ್ ನಾಯಕ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    4 − 4 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.