ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವದಂದು ‘ನಾರಿ ತರಂಗ್’ ಕಾರ್ಯಕ್ರಮದೊಂದಿಗೆ ಕಾಲೇಜಿನ ಮಹಿಳಾ ವೇದಿಕೆಯ ಉದ್ಘಾಟನೆಗೊಂಡಿತು.
ಈ ಕಾರ್ಯಕ್ರಮದ ಭಾಗವಾಗಿ, ದೇಶ ಭಕ್ತಿ ಗೀತೆಗಳು, ಮಹಿಳಾ ಸ್ವಾತಂತ್ರ್ಯ ಹೋರಾಟಗಾರ ಕುರಿತು ಭಾಷಣ ಹಾಗೂ ಅವರ ತ್ಯಾಗ, ಧೈರ್ಯವನ್ನು ಚಿತ್ರಿಸುವ ಚಿತ್ರಪಟ ತಯಾರಿ ಚಟುವಟಿಕೆಗಳನ್ನು ಒಳಗೊಂಡಿತ್ತು.
ಕಾಲೇಜಿನ ಮಹಿಳಾ ವೇದಿಕೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸೃಜನಶೀಲತೆ ಮತ್ತು ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀಮತಿ ಮಾಲತಿ, , ಬಿಸಿಎ ವಿಭಾಗದ ಮುಖ್ಯಸ್ಥರಾದ ಸ್ವರ್ಣ ರಾಣಿ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅರ್ಚನಾ ಉಪಾಧ್ಯ, ಮಹಿಳಾ ವೇದಿಕೆಯ ಸಂಯೋಜಕರಾದ ಗಣಕಶಾಸ್ತ್ರದ ಉಪನ್ಯಾಸಕರಾದ ನಾಫಿಯಾ ಅಖ್ತಾರಿ ಮತ್ತು ಐಶ್ವರ್ಯ ಕುಲಾಲ್, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಿಸಿಎ ವಿದ್ಯಾರ್ಥಿನಿ ದೀಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.
ಸ್ವಾತಂತ್ರ್ಯ ದಿನದ ನಿಜವಾದ ಮನೋಭಾವವನ್ನು ಪ್ರತಿಬಿಂಬಿಸುವ ಸ್ವಾತಂತ್ರ್ಯ, ಏಕತೆ ಮತ್ತು ಮಹಿಳಾ ಸಬಲೀಕರಣವನ್ನು ಎತ್ತಿ ಹಿಡಿಯುವ ಸಾಮೂಹಿಕ ಪ್ರತಿಜ್ಞೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.















