ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಶಾ ಮುಕ್ತ ಭಾರತ ಅಭಿಯಾನವು ದೇಶದ ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಮಹತ್ವದ ಪ್ರಯತ್ನವಾಗಿದೆ. ಇಂದಿನ ಕಾಲದಲ್ಲಿ ಯುವಜನರು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದು ವಿಷಾದನೀಯ. ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲ, ಕುಟುಂಬದ ಶಾಂತಿ ಮತ್ತು ಸಮಾಜದ ಪ್ರಗತಿಯನ್ನು ಸಹ ಹಾಳುಮಾಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂಜ ನಾಯ್ಕ್ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಮಾಧಕ ವ್ಯಸನ ವಿರೋಧಿ ಘಟಕದ ಆಶ್ರಯದಲ್ಲಿ ನಡೆದ ‘ನಶಾ ಮುಕ್ತ ಭಾರತ’ ಅಭಿಯಾನದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಹಿಸಿದ್ದರು.
ವಿಲ್ಮಾ ಶೆರಲ್ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್. ಘಟಕ 1ರ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ಸ್ವಾಗತಿಸಿ, ಎನ್.ಎಸ್.ಎಸ್. ಘಟಕ 2ರ ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ನಿರೂಪಿಸಿ, ಮಾಧಕ ವ್ಯಸನ ವಿರೋಧಿ ಘಟಕದ ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕುತ್ತೂರು ವಂದಿಸಿದರು.










